Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಹುಲ್‍ಗಾಂಧಿ ಹೇಳಿಕೆ ವಿರೋಧಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 13 : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಮೀಸಲಾತಿ ರದ್ದುಪಡಿಸುತ್ತೇವೆಂದು ರಾಹುಲ್‍ಗಾಂಧಿ ವಿದೇಶದಲ್ಲಿ ಕುಳಿತು ಹೇಳಿರುವುದನ್ನು ವಿರೋಧಿಸಿ ಬಿಜೆಪಿ ವತಿಯಿಂದ ನಗರದ ಒನಕೆ ಓಬವ್ವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಟಿ.ಸುರೇಶ್‍ಸಿದ್ದಾಪುರ ವಿರೋಧ ಪಕ್ಷದ ನಾಯಕ ರಾಹುಲ್‍ಗಾಂಧಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಮೀಸಲಾತಿ ತೆಗೆಯುತ್ತೇವೆಂದು ಅಮೇರಿಕಾದಲ್ಲಿ ಹೇಳಿರುವುದನ್ನು ನೋಡಿದರೆ ದಲಿತರನ್ನು ಕೇವಲ ಮತಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆನ್ನುವುದು ಖಚಿತವಾಯಿತು. ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಡಾ.ಬಿ.ಆರ್.ಅಂಬೇಡ್ಕರ್‍ರವರನ್ನು ಎರಡು ಬಾರಿ ಪಾರ್ಲಿಮೆಂಟ್ ಚುನಾವಣೆಯಲ್ಲಿ ಸೋಲಿಸಿದ ಕೀರ್ತಿ ಕಾಂಗ್ರೆಸ್‍ಗೆ ಸಲ್ಲುತ್ತದೆ. ಎಸ್ಸಿ.ಪಿ. ಟಿ.ಎಸ್ಪಿ. ಯೋಜನೆಯ 25 ಸಾವಿರ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು?

ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ. ಲೂಟಿ ಹೊಡೆದಿರುವ ದಲಿತ ವಿರೋಧಿ ಕಾಂಗ್ರೆಸ್ ಡಾ.ಬಿ.ಆರ್.ಅಂಬೇಡ್ಕರ್ ಅಂತ್ಯಕ್ರಿಯೆಗೂ ಜಾಗ ಕೊಡಲಿಲ್ಲ. ರಾಹುಲ್‍ಗಾಂಧಿ ತನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆದು ದೇಶದ ಜನರ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಜಿ.ಟಿ.ಸುರೇಶ್ ಸಿದ್ದಾಪುರ ಎಚ್ಚರಿಸಿದರು.

ನಗರಸಭೆ ಸದಸ್ಯ ಹೆಚ್.ಶ್ರೀನಿವಾಸ್ ಮಾತನಾಡುತ್ತ ಮೂರನೆ ಬಾರಿಗೆ ದೇಶದ ಪ್ರಧಾನಿಯಾಗಿರುವ ನರೇಂದ್ರಮೋದಿಯನ್ನು ಅಸ್ಥಿರಗೊಳಿಸಲು ರಾಹುಲ್‍ಗಾಂಧಿ ಇಂತಹ ಹುಚ್ಚು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದಲ್ಲ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಹಿಂದು-ಮುಸಲ್ಮಾನರ ನಡುವೆ ನಡೆದ ಕೋಮುಗಲಭೆಗೆ ಕಾಂಗ್ರೆಸ್ ಕಾರಣ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆಂಬ ಹಗಲು ಗನಸು ಕಾಣುತ್ತಿರುವ ರಾಹುಲ್‍ಗಾಂಧಿ ಭಾರತದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಮೀಸಲಾತಿಯನ್ನು ರದ್ದುಪಡಿಸುವುದಾಗಿ ಅಮೇರಿಕಾದಲ್ಲಿ ಹೇಳಿರುವುದು ಹುರುಳಿಲ್ಲದ ಮಾತು. ಒಬ್ಬ ನರೇಂದ್ರಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿದರೆ ಯೋಗಿ ಆದಿತ್ಯನಾಥ್‍ರಂತವರು ಹುಟ್ಟಿಕೊಳ್ಳುತ್ತಾರೆಂದು ರಾಹುಲ್‍ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್‍ಕುಮಾರ್ ಮಾತನಾಡಿ ಎಸ್ಸಿ.ಎಸ್ಟಿ.ಗಳ ಮೀಸಲಾತಿಯನ್ನು ತೆಗೆದು ಹಾಕುತ್ತೇವೆಂದು ರಾಹುಲ್‍ಗಾಂಧಿ ವಿದೇಶದಲ್ಲಿ ಬಾಯಿಗೆ ಬಂದಂತೆ ಹೇಳಿಕೆ ನೀಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ವಿರೋಧಿಗಳು ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ. ದೇಶದ ಜನರ ಕ್ಷಮೆ ಕೇಳಬೇಕೆಂದು ಎಚ್ಚರಿಸಿದರು.

ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ಖಜಾಂಚಿ ಮಾಧುರಿ ಗಿರೀಶ್, ಶಿವಣ್ಣಾಚಾರಿ,

ಎಸ್ಸಿ.ಮೋರ್ಚಾ ಅಧ್ಯಕ್ಷ ತಿಪ್ಪೇಸ್ವಾಮಿ, ಮಂಜು, ಕೃಷ್ಣ, ಪ್ರಕಾಶ್, ಬಸವೇಶ್, ಶಂಭು, ಪಲ್ಲವಿ ಪ್ರಸನ್ನ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಕಿರಣ್, ಪಾಂಡು, ಪರಶುರಾಮ್, ಭರತ್, ಜನಾರ್ಧನಸ್ವಾಮಿ, ರಾಮು, ವಸಂತಕುಮಾರ್, ವೀರೇಶ್‍ಜಾಲಿಕಟ್ಟೆ, ನಗರಸಭೆ ಸದಸ್ಯ ಹರೀಶ್, ಪ್ರಭು, ಉದಯ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಶೈಲಜಾರೆಡ್ಡಿ, ಉಪಾಧ್ಯಕ್ಷೆ ಶ್ಯಾಮಲಶಿವಪ್ರಕಾಶ್, ಎಸ್ಸಿ.ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಭಾರ್ಗವಿ ದ್ರಾವಿಡ್, ಪ್ರಧಾನ ಕಾರ್ಯದರ್ಶಿ ಶಾಂತಮ್ಮ, ಬಸಮ್ಮ, ಭಾರತಿ, ವೀಣ, ರಜಿನಿ, ಕವನ, ಕವಿತ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀರ್ಣ, ಮಲಬದ್ಧತೆ ಸಮಸ್ಯೆನ್ನು ಎಂದಿಗೂ ನಿರ್ಲಕ್ಷಿಸಬೇಡಿ : ಇದು ಹೃದಯಕ್ಕೆ ತೊಂದರೆ

ನಮ್ಮ ದೇಹದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೂ ಕೆಲವೊಂದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಸುಮಾರು ಜನಕ್ಕೆ ಅಜೀರ್ಣ ಹಾಗೂ ಮಲಬದ್ಧತೆಯ ಸಮಸ್ಯೆ ಕಾಡುತ್ತಿರುತ್ತದೆ. ಇದು ಕಾಮನ್ ತಾನೇ ಎಂದು ನಿರ್ಲಕ್ಷ್ಯ ಮಾಡಿದರೆ ಅದರಿಂದ ಮುಂದೆ ಹೃದಯಕ್ಕೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ: ಈ ರಾಶಿಯವರಿಗೆ ಒಳ್ಳೆಯ ಸಂಬಂಧ ಮದುವೆಗೆ ಒಲೆಯಲಿದೆ ಶುಕ್ರವಾರರಾಶಿ ಭವಿಷ್ಯ -ನವೆಂಬರ್-22,2024 ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

error: Content is protected !!