Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಮುನಿರತ್ನ ವಿರುದ್ದ ಜಾತಿ ನಿಂದನೆ ಕೇಸು ದಾಖಲಿಸಿ ಬಂಧಿಸಿ : ಚಿತ್ರದುರ್ಗದಲ್ಲಿ ಛಲವಾದಿ ಜನಾಂಗದಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 14 : ಆರ್.ಆರ್.ನಗರ ಶಾಸಕ ಮುನಿರತ್ನ ಬಿ.ಬಿ.ಎಂ.ಪಿ.ಗುತ್ತಿಗೆದಾರ ಚಲುವರಾಜರವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ವಿರೋಧಿಸಿ ಛಲವಾದಿ ಜನಾಂಗದವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಕಚೇರಿ ಸಹಾಯಕರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಲಂಚದ ವಿಚಾರವಾಗಿ ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಸೊಂಟದ ಕೆಳಗಿನ ಮಾತುಗಳನ್ನಾಡಿರುವ ಶಾಸಕ ಮುನಿರತ್ನರನ್ನು ಕೂಡಲೆ ಬಂಧಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆಂದು ಎಚ್ಚರಿಸಿದ ಪ್ರತಿಭಟನಾಕಾರರು ಶಾಸಕನ ಮೇಲೆ ಜಾತಿ ನಿಂದನೆ ಕೇಸು ದಾಖಲಿಸುವಂತೆ ಆಗ್ರಹಿಸಿದರು.

ಛಲವಾದಿ ಗುರುಪೀಠದ ಬಸವನಾಗಿದೇವಸ್ವಾಮಿ, ಛಲವಾದಿ ಜನಾಂಗದ ಮುಖಂಡರುಗಳಾದ ಹೆಚ್.ಸಿ.ನಿರಂಜನಮೂರ್ತಿ, ಎಸ್.ಎನ್.ರವಿಕುಮಾರ್, ದಯಾನಂದ್, ನ್ಯಾಯವಾದಿ ಅಣ್ಣಪ್ಪಸ್ವಾಮಿ, ಓಂಕಾರಮೂರ್ತಿ, ಚಂದ್ರಣ್ಣ, ಜಗ್ಗಣ್ಣ, ತಿಪ್ಪೇಸ್ವಾಮಿ, ಚಿದಾನಂದಮೂರ್ತಿ, ವಕೀಲ ಶಶಾಂಕ, ಪ್ರಸಾದ್, ನಾಗರಾಜ್, ಸುಹಾಸ್ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment