Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವಂಬರ್ 16ರಂದು ಸರ್ಕಾರಿ ನೌಕರರ ಸಂಘದ ಚುನಾವಣೆ : ಅಂದೇ ಫಲಿತಾಂಶ ಪ್ರಕಟ..!

Facebook
Twitter
Telegram
WhatsApp

 

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನವೆಂಬರ್.16ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶವೂ ಪ್ರಕಟವಾಗಲಿದೆ. ಈ ಸಂಬಂಧ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾಧಿಕಾರಿ ಎ.ಹನುಮರಸಯ್ಯ ಅವರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ಎಲ್ಲಾ ಹಂತದ ಚುನಾವಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ. ಸಂಘದ ತಾಲ್ಲೂಕು ಶಾಖೆ, ಯೋಜನಾ ಶಾಖೆ, ಜಿಲ್ಲಾ ಶಾಖೆಗಳ ನಿರ್ದೇಶಕರು ಮತ್ತು ಪದಾಧಿಕಾರಿಗಳ ಚುನಾವಣೆ ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್‌ ಸದಸ್ಯರ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳ ಚುನಾವಣೆಗಳನ್ನು ಈ ಕೆಳಕಂಡಂತೆ ಚುನಾವಣಾ ವೇಳಾಪಟ್ಟಿಯಂತೆ ನಡೆಸುವುದಾಗಿ ತಿಳಿಸಿದ್ದಾರೆ.

 

ತಾಲ್ಲೂಕು ಶಾಖೆ ಹಾಗೂ ಯೋಜನಾ ಶಾಖೆಗಳ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 09-10-202480 2 28-10- 2024ರವರೆಗೆ ಚುನಾವಣೆ ನಡೆಯಲಿದೆ. ತಾಲ್ಲೂಕು ಶಾಖೆಗಳ ತಾಲ್ಲೂಕು ಅಧ್ಯಕ್ಷರು, ಯೋಜನಾ ಶಾಖೆಗಳ ಅಧ್ಯಕ್ಷರು ಹಾಗೂ ತಾಲ್ಲೂಕು ಯೋಜನಾ ಶಾಖೆಗಳ ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಸ್ಥಾನಕ್ಕೆ ದಿನಾಂಕ 30-10-202480 16-11-2024ರವರೆಗೆ ಚುನಾವಣೆ ನಡೆಯಲಿದೆ. ಜಿಲ್ಲಾ ಶಾಖೆಗಳ ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್‌ ಸದಸ್ಯರ ಸ್ಥಾನಗಳಿಗೆ ದಿನಾಂಕ 19-11- 2024 80 04-12-2024ರ ವರೆಗೆ ನಡೆಯಲಿದೆ. ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯರ ಮತಕ್ಷೇತ್ರವಾರು ಸ್ಥಾನಗಳಿಗೆ ದಿನಾಂಕ 17-09- 2024ರಿಂದ ದಿನಾಂಕ 04-12-2024ರವರೆಗೆ ಚುನಾವಣೆ ನಡೆಸಲು ನಿಗದಿ ಪಡಿಸಲಾಗಿದೆ.

ರಾಜ್ಯ ಸಂಘದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಗಳು ದಿನಾಂಕ 09-12-2024ರಿಂದ 27-12-2024ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ. ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಚುನಾವಣಾ ವೇಳಾಪಟ್ಟಿ, ನಾಮಪತ್ರ ಸಲ್ಲಿಕೆ ದಿನಾಂಕ 09-10-2024ರಿಂದ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 18-10-2024 ನಾಮಪತ್ರ ಪರಿಶೀಲನೆ ದಿನಾಂಕ 19-10-2024ರಂದು ನಡೆಯಲಿದೆ.

ಅರ್ಹ ಅಭ್ಯರ್ಥಿಗಳ ಹೆಸರನ್ನು ದಿನಾಂಕ 19-10- 2024ರಂದು ಪ್ರಕಟಿಸಲಾಗುತ್ತದೆ. ಉಮೇದುವಾರಿಕೆ ಹಿಂಪಡೆಯಲು ದಿನಾಂಕ 21-10- 2024 ಕೊನೆಯ ದಿನವಾಗಿದೆ. ಅಂತಿಮ ಕಣದಲ್ಲಿನ ಅಭ್ಯರ್ಥಿಗಳ ಪಟ್ಟಿಯನ್ನು ದಿನಾಂಕ 21-10-20240 0 5.30 ថ ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಸ್ಥಾನಕ್ಕೆ ದಿನಾಂಕ 28-10-2024ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ದಿನಾಂಕ 28-10-2024ರಂದು ಸಂಜೆ ಮತದಾನ ಮುಕ್ತಾಯದ ನಂತ್ರ ಮತಏಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ. ತಾಲ್ಲೂಕು ಶಾಖೆಗಳ ತಾಲ್ಲೂಕು ಅಧ್ಯಕ್ಷರು, ಯೋಜನಾ ಶಾಖೆಗಳ ಅಧ್ಯಕ್ಷರು ಹಾಗೂ ತಾಲ್ಲೂಕು ಯೋಜನಾ ಶಾಖೆಗಳ ಖಜಾಂಚಿ ಮತ್ತು ರಾಜ್ಯ ಪರಿಷತ್‌ ಸದಸ್ಯರ ಚುನಾವಣಾ ವೇಳಾಪಟ್ಟಿ

ದಿನಾಂಕ 31-10-2024ರಿಂದ ನಾಮಪತ್ರ ಸಲ್ಲಿಕೆ ಆರಂಭ

ದಿನಾಂಕ 31-10-2024ರಿಂದ ನಾಮಪತ್ರ ಸಲ್ಲಿಕೆ ಆರಂಭ

ದಿನಾಂಕ 07-11-2024ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ.

ದಿನಾಂಕ 08-11-2024ರಂದು ನಾಮಪತ್ರಗಳ ಪರಿಶೀಲನೆ

ದಿನಾಂಕ 08-11-2024ರಂದು ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟ

ದಿನಾಂಕ 11-11-2024ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ

ದಿನಾಂಕ 16-11-2024ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ

ದಿನಾಂಕ 16-11-2024ರಂದು ಮತದಾನ ಮುಕ್ತಾಯದ ನಂತ್ರ ಮತಏಣಿಕೆ, ಫಲಿತಾಂಶ ಪ್ರಕಟವಾಗಲಿದೆ. ಇದಿಷ್ಟು ಚುನಾವಣೆಯ ವೇಳಾಪಟ್ಟಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!