Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಲಿನ ದರ ಏರಿಕೆಗೆ ಮುಂದಾದ ಸರ್ಕಾರಕ್ಕೆ ರೈತರಿಂದ ಸವಾಲು..!

Facebook
Twitter
Telegram
WhatsApp

 

ರಾಜ್ಯದಲ್ಲಿ ನಂದಿನಿ ಹಾಲಿನ ದರ ಆಗಾಗ ಏರಿಕೆಯಾಗುತ್ತಲೇ ಇದೆ. ಕಳೆದ ಜೂನ್ ತಿಂಗಳಲ್ಲಷ್ಟೇ ಹಾಲಿನ ದರವನ್ನು ಏರಿಕೆ ಮಾಡಿತ್ತು ಸರ್ಕಾರ. ಆದರೆ ದರ ಏರಿಕೆಯಲ್ಲ ಹಾಲನ್ನು ಜಾಸ್ತಿ ಮಾಡಿರುವ ಕಾರಣ ದರ ಏರಿಕೆ ಮಾಡಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದರು. ಮಳೆಗಾಲ ಆಗಿರುವ ಕಾರಣ ಹಾಲಿನ ಪ್ರಮಾಣವೂ ಹೆಚ್ಚಾಗಲಿದೆ. ಹೀಗಾಗಿ ರೈತರಿಂದ ಹಾಲನ್ನು ತೆಗೆದುಕೊಳ್ಳುವುದಕ್ಕೆ ಆಗಲ್ಲ ಎಂದು ಹೇಳಲು ಆಗುವುದಿಲ್ಲ. ಬದಲಿಗೆ 50 ML ಹಾಲಿಗೆ ದರವನ್ನು ಹೆಚ್ಚಳ ಮಾಡಿದ್ದೇವೆ ಎಂಬ ಸ್ಪಷ್ಟನೆ ನೀಡಿತ್ತು. ಇದೀಗ ಮತ್ತೆ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುತ್ತೀವಿ. ಆ ದರ ನೇರವಾಗಿ ರೈತರಿಗೆ ತಲುಪುವಂತೆ ಮಾಡುತ್ತೇವೆ ಎಂದು ಇತ್ತಿಚೆಗೆ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಈ ಹೇಳಿಕೆಗೆ ರಾಜ್ಯದೆಲ್ಲೆಡೆ ಉತ್ಪಾದಕರಿಂದ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರ ರೈತರ ಹೆಸರೇಳಿಕೊಂಡೆ ಈಗಾಗಲೇ ಎರಡು ಬಾರಿ ಹಾಲಿನ ದರವನ್ನು ಏರಿಕೆ ಮಾಡಿದೆ. ಆದರೆ ಆ ಹಣವನ್ನು ರೈತರಿಗೆ ಈವರೆಗೂ ಕೊಟ್ಟಿಲ್ಲ ಎಂದು ಹಾಲು ಉತ್ಪಾದಕರ ಸಂಘ ಆಕ್ರೋಶ ಹೊರ ಹಾಕಿದೆ. ಒಂದು ವೇಳೆ ಸರ್ಕಾರಕ್ಕೆ ನಿಜವಾಗಲೂ ರೈತರ ಮೇಲೆ ಕಾಳಜಿ ಇದ್ದರೆ ಪ್ರೋತ್ಸಾಹ ಧನವನ್ನು ಮೊದಲು ಬಿಡುಗಡೆ ಮಾಡಲಿ ಎಂದೇ ಸವಾಲು ಹಾಕಿದ್ದಾರೆ.

ಪ್ರೋತ್ಸಾಹ ಧನವೇ ಸುಮಾರು 75 ಕೋಟಿ ಬಾಕಿ ಇದೆ. ಇದು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಒಂದರಲ್ಲೇ‌ ಇರುವುದು. ಮೊದಲು ಈ ಹಣವನ್ನು ಬಿಡುಗಡೆ ಮಾಡಲಿ. ನಂದಿನಿ ಹಾಲಿನ ದರ ಏರಿಕೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಸರಿಯಲ್ಲ‌. ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಹಾಲಯ ಪ್ರಕೋಷ್ಟದ ರಾಜ್ಯ ಸಂಚಾಲಕ ರಾಘವೇಂದ್ರ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.‌

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉತ್ತರ ಕನ್ನಡದಲ್ಲಿ ಮಂಗನಬಾವು : ಜನರಲ್ಲಿ ಹೆಚ್ಚಾಯ್ತು ಆತಂಕ..!

ಕಾರವಾರ: ರಾಜ್ಯದಲ್ಲಿ ಮಂಗನಬಾವು ಕಾಯಿಲೆ ಜನರಿಗೆ ಆತಂಕ ತಂದೊಡ್ಡಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಬೃಂದಾವನ ವಸತಿ ಬಡಾವಣೆಯಲ್ಲಿನ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗನಬಾವು ಕಾಯಿಲೆಯ ಅಬ್ಬರ ಜೋರಾಗಿತ್ತು. ಇಲ್ಲಿನ 6 ರಿಂದ

ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

    ಸುದ್ದಿಒನ್, ಚಿತ್ರದುರ್ಗ, ನವಂಬರ್. 22 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ನವೆಂಬರ್. 22 ರ, ಶುಕ್ರವಾರ) ಮಾರುಕಟ್ಟೆಯಲ್ಲಿ ಧಾರಣೆ

ರೇಣುಕಾಸ್ವಾಮಿ ಶವದ ಮುಂದೆ ದರ್ಶನ್ : ಫೋಟೋ ರಿಟ್ರೀವ್..!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರ ತಲೆಯ ಮೇಲೆ ತೂಗು ಕತ್ತಿ ನೇತಾಡುತ್ತಿದೆ. ಅನಾರೋಗ್ಯದ ಸಮಸ್ಯೆಯಿಂದ ಒಂದೂವರೆ ತಿಂಗಳುಗಳ ಕಾಲ ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಪೊಲೀಸರು ಮಾತ್ರ ದರ್ಶನ್

error: Content is protected !!