ಸುದ್ದಿಒನ್, ಚಿತ್ರದುರ್ಗ, (ನ.23): ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯ ಚಿತ್ರದುರ್ಗ ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಎಸ್. ನವೀನ್ ಮಂಗಳವಾರ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಮುರಳಿ, ದಾವಣಗೆರೆ ಜಿಲ್ಲಾ ಘಟಕದ ವೀರೆಶ್ ಹನಗವಾಡಿ , ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು, ದಾವಣಗೆರೆ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ, ಎಂ ಚಂದ್ರಪ್ಪ, ಪೂರ್ಣಿಮಾ ಶ್ರೀನಿವಾಸ್, ಗೂಳಿಹಟ್ಟಿ ಶೇಖರ್ ವಿಧಾನ ಪರಿಷತ್ ಸದಸ್ಯರಾದ ಎ. ನಾರಾಯಣಸ್ವಾಮಿ, ಚಿದಾನಂದ ಗೌಡ ,ಸೇರಿದಂತೆ ಪಕ್ಷದ ಪಧಾದಿಕಾರಿಗಳು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದ್ದರು.