Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾದಿಗ ನೌಕರರ ಸಾಂಸ್ಕೃತಿಕ ಸಂಘದಿಂದ ಪ್ರತಿಭಾ ಪುರಸ್ಕಾರ : ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದಿಂದ 2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವೀತಿಯ ಪಿ.ಯು.ಸಿ.ಯಲ್ಲಿ ಶೇ. 80 ಕ್ಕೂ ಹೆಚ್ಚಿನ ಅಂಕಗಳನ್ನು ಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸೆಪ್ಟೆಂಬರ್ 22 ರಂದು ತ.ರಾ.ಸು.ರಂಗಮಂದಿರದಲ್ಲಿ ಸನ್ಮಾನಿಸಲಾಗುವುದು.

ತಾಲ್ಲೂಕಿನ ಮಾದಿಗ ಸಮುದಾಯದ ಅರ್ಹ ವಿದ್ಯಾರ್ಥಿಗಳು ದಿನಾಂಕ: 20-9-2024 ರೊಳಗಾಗಿ ಸ್ವವಿವರದೊಂದಿಗೆ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿ, ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಮಾದಿಗ ನೌಕರರ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಿ.ಟಿ.ಶ್ರಿನಿವಾಸ್, ಪ್ರಧಾನ ಕಾರ್ಯದರ್ಶಿ ಎಂ.ತಿಪ್ಪೇಸ್ವಾಮಿ ಇವರುಗಳು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ : 9535561878, 9900915346 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment