ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.
ಈ ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಎಂಜಿನಿಯರ್(ಮೆಕಾನಿಕಲ್, ಎಲೆಕ್ಟ್ರಿಕಲ್&ಎಲೆಕ್ಟ್ರಾನಿಕ್ಸ್) ಎಎನ್‍ಎಮ್, ಜಿಎನ್‍ಎಮ್, ಬಿ.ಎಸ್ಸಿ ನರ್ಸಿಂಗ್ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತರು ಕನಿಷ್ಠ 8 ಸೆಟ್ ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಈ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ: 7483808321, 08192-259446 ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.





