ಬೆಂಗಳೂರು: ನಿರಂತರ ಮಳೆಯಿಂದಾಗಿ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ. ಬೆಳೆ ಹಾಗಿದೆ, ಸಾಕಷ್ಟು ಜನ ಮನೆಗಳನ್ನ ಕಳೆದುಕೊಂಡಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರೊಶೀಲನೆ ನಡೆಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಯಲಹಂಕ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಧಾನಿ ಮೋದಿ ಅವರು ಕರೆ ಮಾಡಿದ್ದರು.ರಾಜ್ಯಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಸುರಿದ ಸತತ ಮಳೆ ಹಾಗೂ ಇಲ್ಲಿನ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಅವರು ವಿಚಾರಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಕೂಡ ಮಾಹಿತಿ ಪಡೆದುಕೊಂಡಿದ್ದಾರೆ. ಯಲಹಂಕದ ಪರಿಸ್ಥಿತಿ ಕೇಳಿ ಭೇಟಿ ನೀಡುತ್ತೇವೆಂದು ತಿಳಿಸಿದ್ದಾರೆ. ಕಳೆದ ಮೂರು ದಿನದಿಂದ ನೀರು ಮಿಂತು ಯಲಹಂಕದ ಜನರ ಜೀವನ ಅಸ್ತವ್ಯಸ್ತವಾಗಿದೆ. ಜಕ್ಕೂರಿನ ಜವಾಹರ್ ಲಾಲ್ ನೆಹರೂ ಸಂಸ್ಥೆಯಲ್ಲಿ ಭಾರೀ ಹಾನಿಯಾಗಿದೆ. ಮಳೆ ನೀರಿನಿಂದ ಕಂಪ್ಯೂಟರ್ ಗಳೆಲ್ಲಾ ಹಾನಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.