ಮೈಸೂರು: ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಬಯಸಿದ್ದ ಸಂದೇಶ್ ನಾಗರಾಜ್ ಅವರಿಗೆ ಬೇಸರವಾಗಿದೆ. ಟಿಕೆಟ್ ಕೈ ತಪ್ಪಿದ್ದು, ಅಲ್ಲಿಯೂ ಇಲ್ಲ ಇಲ್ಲಿಯೂ ಇಲ್ಲ ಎಂಬಂತಾಗಿದೆ.
ಈ ಬಗ್ಗೆ ಪತ್ರ ಬರೆದಿರುವ ಸಂದೇಶ್ ನಾಗರಾಜ್ ಬೇಸರವನ್ನ ಹೊರ ಹಾಕಿದ್ದಾರೆ. ಮತದಾರರು , ಅಭಿಮಾನಿ ದೇವರುಗಳು, ರಾಜಕೀಯ ನಾಯಕರಿಗೆ ವಂದನೆಗಳು.
ಈ ಬಾರಿಯ ವಿಧಾನ ಪಲಷತ್ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಲು ವಿಷಾದಿಸುತ್ತೇನೆ. ಹನ್ನೆರಡು ವರ್ಷಗಳಿಂದ ವಿಧಾನ ಪರಿಷತ್ ಸದಸ್ಯನಾಗಿ ಜನಾನುರಾಗಿ ಕೆಲಸಗಳನ್ನು ಮಾಡಿದ ತೃಪ್ತಿ ನನಗಿದೆ. ಆ ಮೂಲಕ ಮತದಾರರು ಹಾಗೂ ಪಕ್ಷದ ಋಣ ತೀರಿಸಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದೆ.
ಆದರೆ ಪಕ್ಷದ ನಿಯಮದಂತೆ ವಯೋಮಿತಿಯ ಕಾರಣಕ್ಕೆ ನನಗೆ ಟಿಕೆಟ್ ಕೈ ತಪ್ಪಿದೆ. ಆದರೂ ನನಗೆ ಒತ್ತಾಸೆಯಾಗಿ ಶ್ರಮಿಸಿದ ಬಿಜೆಪಿಯ ಎಲ್ಲಾ ಮುಖಂಡಲಿಗೂ ವಂದನೆಗಳನ್ನು ಸಲ್ಲಿಸುತ್ತೇನೆ. ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಮೈಸೂರು ನಗರಾಧ್ಯಕ್ಷರಾದ ಶ್ರೀವತ್ಸ, ರವಿಶಂಕರ್, ಹೇಮಂತ್‌ಕುಮಾರ್, ಫಣೀಶ್ ಸೇರಿದಂತೆ ಎಲ್ಲಾ ಮುಖಂಡರು, ಕಾರ್ಯಕರ್ತರಿಗೂ ಧನ್ಯವಾದಗಳು.
ನನ್ನ ಚುನಾವಣೆ ಸ್ಪರ್ಧೆಗೆ ಜಾ.ದಳದಿಂದಲೂ ಒಲವು ತೋರಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ರೇವಣ್ಣ ಅವರಿಗೂ ಧನ್ಯವಾದಗಳು. ಎಲ್ಲಾ ಅಭಿಮಾನಿ ದೇವರುಗಳಿಗೂ ಕೃತಜ್ಞತೆಗಳು. ನನ್ನ ಜನ ಸೇವೆ ಹೀಗೆಯೇ ಮುಂದುವರೆಯಲಿದೆ. ಸಂದೇಶ್ ನಾಗರಾಜ್
ಎಂದು ಪತ್ರವೊಂದನ್ನ ಬರೆದು ಟಿಕೆಟ್ ಕೈ ತಪ್ಪಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.