ಚಿತ್ರದುರ್ಗ. ಸೆ.23 : ಇದೇ ಸೆಪ್ಟೆಂಬರ್ 24 ರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ಅವರು ತಿಳಿಸಿದ್ದಾರೆ.
ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ KRSNAA DIAGNOSTICS LTD ಅವರು ಪತ್ರ ಮುಖೇನ ಮಾಹಿತಿ ನೀಡಿರುತ್ತಾರೆ. ಹೀಗಾಗಿ ಸಾರ್ವಜನಿಕರು ಮತ್ತು ರೋಗಿಗಳು ಸಹಕರಿಸಬೇಕು ಎಂದು ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












