ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಬಿಜೆಪಿ ಆಗ್ರಹ

1 Min Read

 

ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ರಾಜ್ಯಪಾಲರ ಪ್ರಾಸಿಕ್ಯೂಷನ್ ಎತ್ತಿ ಹಿಡಿದಿದೆ. ಇದೀಗ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಹೌಹಾರಿದ್ದು, ಟ್ವೀಟ್ ಮೂಲಕ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ @siddaramaiah ನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ. ರಾಜೀನಾಮೆ ನೀಡಿ, ತನಿಖೆ ಎದುರಿಸಿ. ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ. ಜಯತೆ, ಜಯತೆ, ಸತ್ಯಮೇವ ಜಯತೆ!!

ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ @siddaramaiah ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿರುವುದು ಸ್ವಾಗತಾರ್ಹ. ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್‌ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ. ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ. ಈ ಕೇಸ್ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

Share This Article
Leave a Comment

Leave a Reply

Your email address will not be published. Required fields are marked *