Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಸೂರಲ್ಲಿ ಹೆಚ್ಚಿತು ಸಿದ್ದರಾಮಯ್ಯ ಕ್ರೇಜ್.. ಕಾರು, ಆಟೋ ಮೇಲೆಲ್ಲಾ ಸಿಎಂ ಹವಾ..!

---Advertisement---

ಮೈಸೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆಗೆ ವಹಿಸಲಾಗಿದೆ. ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವುದೊಂದೆ ಬಾಕಿ ಇದೆ. ಆದರೆ ಸಿದ್ದರಾಮಯ್ಯ ಅವರ ಬೆಂಬಲಿಗರು ಸದಾ ನಾವು ನಿಮ್ಮೊಂದಿಗೆ ಎಂಬ ಅಭಿಯಾನ ಶುರು ಮಾಡಿದ್ದಾರೆ. ಮೈಸೂರಿನಲ್ಲಿ ಕಾರ್ಯಕರ್ತರು ಬೆಂಬಲಿಗರು ಸಿದ್ದರಾಮಯ್ಯ ಅವರ ಪೋಸ್ಟರ್ ಹಿಡಿದು ಅಭಿಯಾನ ಶುರು ಮಾಡಿದ್ದಾರೆ. ವಾದ್ಯ ಮೇಳಗಳೊಂದಿಗೆ, ಸಿದ್ದರಾಮಯ್ಯ ಅವರ ಪೋಸ್ಟರ್ ಹಿಡಿದು, ನಾವೂ ನಿಮ್ಮೊಂದಿಗೆ ಇದ್ದೇವೆ‌ ಎಂದು ಘೋಷಣೆ ಮೊಳಗಿಸಿದ್ದಾರೆ.

ಅಷ್ಟೇ ಅಲ್ಲ ವಿಮಾನ ನಿಲ್ದಾಣದಲ್ಲಿ ಕಾರುಗಳ ಮೇಲೆ ಸಿದ್ದರಾಮಯ್ಯ ಅವರ ಭಾವಚಿತ್ರಗಳು ರಾರಾಜಿಸುತ್ತಿವೆ. ಇಂದು ಸಿದ್ದರಾಮಯ್ಯ ಅವರು ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ, ಸಾವಿರಾರು ಸಂಖ್ಯೆಯಲ್ಲಿ ಸಿದ್ದರಾಮಯ್ಯ ಅವರನ್ನು ಸ್ವಾಗತ ಮಾಡುವುದಕ್ಕೆ ಆಗಮಿಸಿದ್ದಾರೆ. ಎಲ್ಲಾ ಕಾರುಗಳ ಮೇಲೆ ನಾನು ಸಿದ್ದರಾಮಯ್ಯ ಅವರ ಪರ ಎಂದು ಪೋಸ್ಟರ್ ಗಳನ್ನು ಅಂಟಿಸಲಾಗಿದೆ‌.

ಇಂದು ಸಿದ್ದರಾಮಯ್ಯ ಅವರಿಗೆ ಮಹತ್ವದ ದಿನವಾಗಿದೆ. ಮೈಸೂರಿನ ಲೋಕಾಯುಕ್ತ ಪೊಲೀಸರು ಇಂದು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಿದ್ದಾರೆ. ಈ ಹಿನ್ನೆಲೆ ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರಲ್ಲಿ ಸಿದ್ದರಾಮಯ್ಯ ವಿರುದ್ಧ ಧ್ವನಿ ಕೇಳುತ್ತಿದೆ. ಮೊದಲು ರಾಜೀನಾಮೆ ಕೊಡಿ ಎಂದೇ ಒತ್ತಡ ಹಾಕುತ್ತಿದ್ದಾರೆ. ಯಾವುದೇ ರೀತಿಯ ತನಿಖೆಗೂ ನಾನು ಸಿದ್ಧ ಎಂಬುದನ್ನು ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರ ಪರವಾಗಿಯೇ ಒಗ್ಗಟ್ಟಾಗಿದ್ದಾರೆ. ಈ ಹಿಂದೆ ಇದ್ದಂತೆ ಡಿಕೆಶಿ ಬಣ, ಸಿದ್ದರಾಮಯ್ಯ ಬಣ ಅಂತೇನಿಲ್ಲ. ಎಲ್ಲರೂ ಸಿದ್ದರಾಮಯ್ಯ ಪರವಾಗಿ ನಿಂತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment