Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಸೇರಿದಂತೆ ಹಲವೆಡೆ ಮೂರ್ನಾಲ್ಕು ದಿನ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ..!

---Advertisement---

ಕಳೆದ ಒಂದು ತಿಂಗಳಿನಿಂದ ಬಿಡುವು ನೀಡಿದ್ದ ಮಳೆರಾಯ ಈಗ ಮತ್ತೆ ಅಬ್ಬರಿಸುವುದಕ್ಕೆ ಶುರು ಮಾಡಿದ್ದಾನೆ. ಈ ಸಮಯದಲ್ಲಿ ಬರುತ್ತಿರುವ ಮಳೆ ಕೆಲವು ಭಾಗದ ರೈತರಿಗೆ ಅಗತ್ಯವಾದುದ್ದಾದರೆ ಇನ್ನು ಕೆಲವು ಭಾಗದ ರೈತರನ್ನು ಸಂಕಷ್ಟಕ್ಕೆ ದೂರಿದೆ. ಈಗ ಜಮೀನುಗಳಿಗೆ ಬೀಜ ಬಿತ್ತನೆ ಮಾಡಿರುವವರಿಗೆ ಮಳೆಯ ಅಗತ್ಯವಿತ್ತು. ಆದರೆ ಚಿಕ್ಕಮಗಳೂರು ಭಾಗದಲ್ಲಿ ರೈತರ ಕಾಫಿ ತೋಟಗಳಲ್ಲಿ ಕಾಫಿ ಹಣ್ಣಿಗೆ ಬಂದಿದೆ. ನಿನ್ನೆಯಿಂದಾನೂ ಬೆಂಬಿಡದೆ ಸುರಿಯುತ್ತಿರುವ ಮಳೆಗೆ ಇನ್ನೆಲ್ಲಿ ಹಣ್ಣಾಗಿರುವ ಕಾಫಿ ನೆಲ ಕಚ್ಚುತ್ತದೋ ಎಂಬ ಭೀತಿ ಎದುರಾಗಿದೆ.

ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರೆದ ಪರಿಣಾಮ ಕೆಲ ಕಡೆ ಸೇತುವೆ ಜಪಾವೃತಗೊಂಡಿವೆ. ಹಿನ್ನೆಲೆ ಕಳಸ-ಬಾಳೆ ಹೊನ್ನೂರು ರಾಜ್ಯ ಹೆದ್ದಾರಿ ಬಂದ್ ಆಗಿದೆ. ಮೂಡಿಗೆರೆ ಭಾಗದಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಮಳೆ ಸುರಿದಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ.

ಇನ್ನು ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಜೋರು ಮಳೆಯಾಗಲಿದೆ. ಈ ಸಂಬಂಧ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ‌. ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ಉಡುಪಿ, ಗದಗ, ಹಾವೇರಿ ಭಾಗದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಆದರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಒಂದು ವಾರಗಳ ಕಾಲ ಹಗುರವಾದ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಹೀಗಾಗಿ ಹೊರಗೆ ಹೋಗುವವರು ಎಚ್ಚರದಿಂದ ಇರಬೇಕಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...