Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೆ.ಎಂ.ಐ.ಟಿ.ಕಾಲೇಜು ಬಳಿ ಸ್ಕೈವಾಕ್ ಅಳವಡಿಸುವಂತೆ ಪ್ರಜಾ ಕಲ್ಯಾಣ ಸಮಿತಿ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 01 : ಜೆ.ಎಂ.ಐ.ಟಿ.ಕಾಲೇಜು ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೈವಾಕ್ ಅಳವಡಿಸುವಂತೆ ಪ್ರಜಾ ಕಲ್ಯಾಣ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಹಾಯಕರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಜೆ.ಎಂ.ಐ.ಟಿ. ಕಾಲೇಜು ಎದುರು ರಾಷ್ಟ್ರೀಯ ಹೆದ್ದಾರಿಯಿರುವುದರಿಂದ ದಿನದ 24 ಗಂಟೆಯೂ ಲಾರಿ, ಬಸ್, ಕಾರು, ಆಟೋ, ದ್ವಿಚಕ್ರವಾಹನಗಳು ಸಂಚರಿಸುತ್ತಿರುತ್ತವೆ. ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಸಾರ್ವಜನಿಕರು, ಲಗೇಜ್ ಆಟೋಗಳ ದಟ್ಟಣೆಯಿರುವುದರಿಂದ ಅನೇಕ ಅಪಘಾತಗಳು ಸಂಭವಿಸಿ ಸಾವು-ನೋವುಂಗಳುಂಟಾಗಿದೆ. ಹಾಗಾಗಿ ಶೀಘ್ರವೇ ಇಲ್ಲಿ ಸ್ಕೈವಾಕ್ ಅಳವಡಿಸಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸುವಂತೆ ಪ್ರಜಾ ಕಲ್ಯಾಣ ಸಮಿತಿ ಕಾರ್ಯಕರ್ತರು ಒತ್ತಾಯಿಸಿದರು.

ಪ್ರಜಾ ಕಲ್ಯಾಣ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಹರೀಶ್ ಟಿ.ಎನ್. ರಾಜ್ಯ ಸಂಘಟನಾ ಕಾರ್ಯದರ್ಶಿ ಪೂಜಾರಿ ಕರಿಯಪ್ಪ, ಕಾರ್ಯಾಧ್ಯಕ್ಷ ಶ್ರೀನಿವಾಸ್‍ಬಾಬು, ಸುಶೀಲಮ್ಮ

ವಿಜಯಲಕ್ಷ್ಮಿ ಎನ್.ಎ. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಕನ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರತ್ನಮ್ಮ ಈ ಸಂದರ್ಭದಲ್ಲಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment