ಕೆಡವುವುದು ಸುಲಭ.. ಕಟ್ಟುವುದು ಕಷ್ಟ : ಸರ್ಕಾರ ಪತನ ಎಂಬ ಮಾತಿಗೆ ಸಾಹಿತಿ ಹಂಪ ನಾಗರಾಜಯ್ಯ ಕಿವಿ ಮಾತು

suddionenews
1 Min Read

ಮೈಸೂರು: ಇಂದಿನಿಂದ ವಿಶ್ವ ವಿಖ್ಯಾತ ದಸರಾ 2024ಕ್ಕೆ ಚಾಲನೆ ಸಿಕ್ಕಿದೆ. ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾಗೆ ಚಾಲನೆ ನೀಡಿದ್ದಾರೆ‌. ಈ ವೇಳೆ ಮಾತನಾಡಿದ ಹಂಪ ನಾಗರಾಜಯ್ಯ ಅವರು, ಸರ್ಕಾರದ ಬಗ್ಗೆ ಕಾಳಜಿ ತೋರಿದ್ದಾರೆ. ಜನರೇ ಆಯ್ಕೆ ಮಾಡಿದ ಸರ್ಕಾರವನ್ನು ಬೀಳಿಸಬಾರದೆಂದು ಕಿವಿ ಮಾತು ಹೇಳಿದ್ದಾರೆ.

ಉದ್ಘಾಟನೆಯ ಬಳಿಕ ಮಾತನಾಡಿದ ಹಂಪ ನಾಗರಾಜಯ್ಯ ಅವರು, ಸರ್ಕಾರಗಳನ್ನು ಉರುಳಿಸುವ ದುರಾಲೋಚನೆ ಬರದಂತೆ ತಡೆಯಬೇಕು. ಚುನಾಯಿತ ಸರ್ಕಾರಗಳನ್ನು ಉಳಿಸುವ ಚಿಂತನೆಯಾಗಬೇಕು‌. ಲೋಕಾಂಬಿಕೆಯೂ ಅಂತಹ ಚಿಂತನೆ ಮೂಡಿಸಲಿ. ಸರ್ಕಾರ ಅಸ್ಥಿರತೆ ಮಾಡಬೇಡಿ. ಮೊದಲೇ ದೊಡ್ಡ ಹೊರೆಗಳಿಂದ ಶ್ರೀಸಾಮಾನ್ಯರು ಬಳಲಿ ಬಸವಳಿದಿದ್ದಾರೆ. ಪುನಃ ನಡೆಯುವ ಚುನಾವಣೆಗಳು ದೊಡ್ಡ ಹೊರೆಯಾಗಲಿವೆ. ಜನರಿಗೆ ಇನ್ನಷ್ಟು ಭಾರ ಹೇರಿದರೆ ಕುಸಿದು ಬಿಡುತ್ತಾನೆ. ಯಾವ ಪಕ್ಷವೂ ಅಧಿಕಾರದಲ್ಲಿ ಶಾಶ್ವತವಾಗಿ ಇರುವುದಕ್ಕೆ ಸಾಧ್ಯವಿಲ್ಲ. ಸೋತ ಪಕ್ಷವೂ ಮತ್ತೆ ಅಧಿಕಾರಕ್ಕೆ ಬರಬಹುದು. ಕೆಡವುವುದು ಸುಲಭ ಆದರೆ ಕಟ್ಟುವುದು ಬಹಳ ಕಷ್ಟ ಎಂದಿದ್ದಾರೆ.

ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ. ಆದರೆ ವಿಪಕ್ಷ ನಾಯಕರು ಸರ್ಕಾರ ಇಷ್ಟರಲ್ಲಿಯೇ ಪತನವಾಗುತ್ತೆ ಎಂದು ಹೇಳಿಕೊಂಡೆ ಬರುತ್ತಿದ್ದಾರೆ. ಹಾಗೇ ಮೂಡಾ ಹಗರಣದ ಸುದ್ದಿಯನ್ನಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕೆಂದು ಪ್ರತಿಭಟನೆಗಳನ್ನು ಮಾಡಿದ್ದಾರೆ. ಆದರೆ ವಿಪಕ್ಷಗಳ ಮಾತಿಗೆ ಜಗ್ಗದೆ ಸಿದ್ದರಾಮಯ್ಯ ಅವರು ತನಿಖೆ ಎದುರಿಸುತ್ತೇನೆ, ರಾಜೀನಾಮೆ ಕೊಡಲ್ಲ ಎಂದಿದ್ದಾರೆ. ಹೀಗಾಗಿಯೇ ಸಾಹಿತಿ ಹಂಪ ನಾಗರಾಜಯ್ಯ ಅವರು ಕಿವಿ ಮಾತು ಹೇಳಿದ್ದಾರೆ. ಜನರೇ ಆಯ್ಕೆ ಮಾಡಿರುವ ಸರ್ಕಾರವನ್ನು ಉಳಿಸುವ ಪ್ರಯತ್ನವಾಗಬೇಕೆಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *