Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜಾತಿಗಣತಿ ವರದಿ, ಒಳಮೀಸಲಾತಿ ಬಗ್ಗೆ ಚರ್ಚಿಸಿ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

ರಾಯಚೂರು, ಅಕ್ಟೋಬರ್, 05 : ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಪ್ರಕಟಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೇಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ : ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು , ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದರು.

ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ : ಜೆಡಿಎಸ್ ನ ಜಿಟಿದೇವೇಗೌಡ, ಮುಖ್ಯಮಂತ್ರಿಯವರನ್ನು ಬೆಂಬಲಿಸಿ ಮಾತನಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ದ , ವಿರೋಧಪಕ್ಷದವರ ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ ಟಿ ದೇವೇಗೌಡರು ಒಬ್ಬರು ಎಂದರು.

ವಿರೋಧಪಕ್ಷದ ನಾಯಕರಾದ ಆರ್ ಅಶೋಕ್ ಅವರ ಮೇಲೆ ಎಫ್ ಐ ಆರ್ ಆಗಿರುವುದರಿಂದ , ತಾನು ರಾಜಿನಾಮೆ ನೀಡಲು ಸಿದ್ದ, ಸಿಎಂ ಅವರೂ ರಾಜಿನಾಮೆ ನೀಡಲಿ ಎಂದು ಹೇಳಿರುವ ಬಗ್ಗೆ ಉತ್ತರಿಸಿ, ಅವರು ಮೊದಲು ರಾಜಿನಾಮೆ ನೀಡಲಿ, ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದರು.

ಕರ್ನಾಟಕ ಸಂಭ್ರಮ : ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. 1973 ರಲ್ಲಿ ಮೈಸೂರು ರಾಜ್ಯಕ್ಕೆ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ , ಕರ್ನಾಟಕ ಎಂದು ನಾಮಕರಣ ಮಾಡಿದ್ದಕ್ಕೆ 50 ವರ್ಷಗಳ ಸಂದಿರುವ ಸುಸಂದರ್ಭದಲ್ಲಿ ಕರ್ನಾಟಕ ಸಂಭ್ರಮವನ್ನು ಇಂದು ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆಯನ್ನೂ ಸಹ ಪ್ರತಿಷ್ಠಾಪಿಸಲಾಗುತ್ತಿದೆ.ಗೋಕಾಕ್ ಚಳುವಳಿ ಮತ್ತು ಕನ್ನಡ ಸಂಭ್ರಮಕ್ಕೆ ಸಂಬಂಧಪಟ್ಟಂತೆ ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಮಾಡುತ್ತಿರುವ ಕಾರ್ಯಕ್ರಮವಾಗಿದೆ ಎಂದರು.

ಸ್ವಾಭಿಮಾನಿ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದುಳಿದ ವರ್ಗದವರು, ದೀನದಲಿತರ, ಅಲ್ಪಸಂಖ್ಯಾತರ ವರ್ಗದವರ ಸ್ವಾಭಿಮಾನಿ ಸಮಾವೇಶ ಇದಾಗಿದೆ ಎಂದರು.

ಜಲಾಶಯದ ಕೆಳಭಾಗದ ರೈತರಿಗೆ ನೀರು ಬಿಡಲು ಶೀಘ್ರ ಕ್ರಮ : ತುಂಗಭದ್ರಾ ಜಲಾಶಯ ಹಾಗೂ ನವಲೆ ಜಲಾಶಯದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಪತ್ರಕರ್ತರ ಪ್ರಶ್ನೆಗೆ ಬಗ್ಗೆ ಉತ್ತರಿಸಿ, ಜಲಾಶಯದಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಪ್ರಸ್ತುತ 102 ಟಿಎಂಸಿ ನೀರು ಸಂಗ್ರಹವಿದೆ. ಸುಮಾರು 30 ಟಿಎಂಸಿ ನೀರಿಗೆ ಆಗುವಷ್ಟು ಹೂಳು ತುಂಬಿರುವುದರಿಂದ ಕೆಳಭಾಗದ ರೈತರಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. 19 ನೇ ಗೇಟ್ ದುರಸ್ತಿಯನ್ನು ಐದು ದಿನಗಳೊಳಗೆ ದುರಸ್ತಿ ಮಾಡಿ ಬಾಗಿನ ಅರ್ಪಿಸಲಾಗಿದೆ. ಸರ್ಕಾರ ಕೆಳಭಾಗದ ರೈತರಿಗೆ ನೀರು ಒದಗಿಸಲು ಅನುಕೂಲವಾಗುವಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...