ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ ಸಚಿವರು, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ, ಕರ್ನಾಟಕ ಸರ್ಕಾರ, ವಿಧಾನ ಸೌಧ, ಬೆಂಗಳೂರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಇಲ್ಯಾಸ್ ಉಲ್ಲಾ ಷರೀಪ್ ರವರು ತಮ್ಮ ಬ್ಯಾಂಕಿನ 2023-24ನೇ ಸಾಲಿನ ಲಾಭದಲ್ಲಿ 2% ಸಹಕಾರ ಶಿಕ್ಷಣ ನಿಧಿ ರೂ.17,75,905-63 ಗಳನ್ನು ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಚಿತ್ರದುರ್ಗ ಇದರ ಜಿಲ್ಲಾ ಸಹಕಾರ ಶಿಕ್ಷಕರಾದ ಶ್ರೀ ನಾಗರಾಜ ಪಾಟೀಲ್ ರವರಿಗೆ ನೀಡಿದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ಹೆಚ್.ಬಿ.ಮಂಜುನಾಥ್, ಡಿಸಿಸಿ ಬ್ಯಾಂಕಿನ ನಿರ್ದೇಶಕರುಗಳಾದ ಶ್ರೀ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ, ಶ್ರೀ ಎಸ್.ಆರ್.ಗಿರೀಶ್, ಶ್ರೀ ಹೆಚ್.ಟಿ.ನಾಗರೆಡ್ಡಿ, ಶ್ರೀ ಟಿ.ಮಹಾಂತೇಶ್, ಶ್ರೀ ಕೆ.ಜಗ್ಗಣ್ಣ, ಶ್ರೀ ಓ.ಮಂಜುನಾಥ್ ಹಾಗೂ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ದಿಲೀಪ್ ಕುಮಾರ್ ಆರ್. ಎಸ್. ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











