Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಭಿಮಾನ ಆವೇಶವಾಗಬಾರದು : ಹಂಸಲೇಖ ಪತ್ರ ಮನವಿ

Facebook
Twitter
Telegram
WhatsApp

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಅವರು ನೀಡಿದ ಹೇಳಿಕೆಯ ಪರ ವಿರೋಧ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿಯೇ ಎದ್ದಿತ್ತು. ಹಂಸಲೇಖ ಪರವಾಗಿಯೂ ಸಾಕಷ್ಟು ಜನ ಮಾತನಾಡಿದ್ರು. ಆ ವಿಚಾರವಾಗಿ ಕ್ಷಮೆಯನ್ನು ಕೇಳಿದ್ದರು. ಇದೀಗ ಅಭಿಮಾನಿಗಳಲ್ಲಿ ಪತ್ರದ ಮೂಲಕ ಮನವಿಯೊಂದನ್ನ ಮಾಡಿಕೊಂಡಿದ್ದಾರೆ.

ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೇ ಅಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ.. ಸಹಿಸಿದ್ದೀನಿ , ಅದರ ಸುಖ ಇವತ್ತು ಅನಿಭವಿಸುತ್ತಿದ್ದೀನಿ. ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ.

ನಾನು ಕೇಳದೆ ಇಡೀ ಕರ್ನಾಟದಲ್ಲಿ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ, ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ. ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿದೆ. ಅಭಿಮಾನ ಆವೇಶವಾಗಬಾರದು: ಆವೇಶ ಅವಘಢಗಳಿಗೆ ಕಾರಣವಾಗಬಾರದು ! ಅಭಿಮಾನ ಹಾಡಿನಂತೆ ಇರಬೇಕು , ಹಾಡು ಕೇಳಿಸುತ್ತದೆ .. ಮುಟ್ಟಿಸುತ್ತದೆ .. ನಿಮ್ಮ ಪ್ರೀತಿ ನನಗೆ ತಲುಪಿದೆ . ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು ಎಂದು ಪತ್ರ ಬರೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!