Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ : ಸಿ.ಎಂ.ಸಿದ್ದರಾಮಯ್ಯ ಕರೆ

Facebook
Twitter
Telegram
WhatsApp

ಬೆಳಗಾವಿ, ಸವದತ್ತಿ ಅ.13: ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

 

ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ ಎಂದರು.

ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಬಿಜೆಪಿಯವರು ಭಯಾನಕ ಮಾತಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ದೇವರು, ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸಿ ಎಂದು ಎಲ್ಲೂ ಹೇಳಿಲ್ಲ ಎಂದರು.

ಗೃಹಲಕ್ಷ್ಮಿ ಯೋಜನೆ ಜಾರಿಯಾದರೆ ಅತ್ತೆ ಸೊಸೆ ಜಗಳ ಆಗ್ತದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆದರು. ಆದರೆ ಗೃಹಲಕ್ಷ್ಮಿ ಹಣವನ್ನು ಕೂಡಿಸಿಟ್ಟು ಅತ್ತೆಯರು ಸೊಸೆಯರಿಗೆ ಬಳೆ ಅಂಗಡಿ ಹಾಕಿಕೊಟ್ಟಿದ್ದಾರೆ, ಟೈಲರಿಂಗ್ ಮೆಷಿನ್ ಕೊಡಿಸಿದ್ದಾರೆ. ಇಂಥವು ನೂರಾರು ಉದಾಹರಣೆಗಳಿವೆ ಎಂದರು.

ತಾಯಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ. ಕ್ಷೇತ್ರದಲ್ಲಿ ಅನಧಿಕೃತವಾಗಿ ಮಳಿಗೆಗಳನ್ನು ಹಾಕಬೇಡಿ. ಅನಧಿಕೃತವಾಗಿ ಇರುವವರಿಗೆ ಬೇರೆ ವ್ಯವಸ್ಥೆ ಮಾಡೋಣ. ಆದರೆ ಅಕ್ರಮವಾಗಿ ಯಾರೂ ಮಳಿಗೆ ಹಾಕದೆ ಸಹಕರಿಸಿ ಎಂದು ಕರೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ವಿಶ್ವಾಸ್ ವೈದ್ಯ ಅವರು ವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಕ್ತದಾನ ಮಾಡುವ ಗುಣ ಬೆಳೆಸಿಕೊಳ್ಳಿ : ಶಿವಲಿಂಗಾನಂದ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ನ. 23 : ರಕ್ತವನ್ನು ಕೃತಕವಾಗಿ ತಯಾರು ಮಾಡಲು ಬರುವುದಿಲ್ಲ, ಅಲ್ಲದೆ ಯಾವ ಪ್ರಾಣಿಗಳ ರಕ್ತವನ್ನು

ಸೆಡೆಗಳು ಎಂದಿದ್ದ ರಜತ್ ಗೆ ಬೆವರಿಳಿಸಿದ ಬಾದ್ ಶಾ..!

ಬಿಗ್ ಬಾಸ್ ಕನ್ನಡ ಸೀಸನ್ 11ಗೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ರಜತ್ ಹಾಗೂ ಶೋಭಾ ಶೆಟ್ಟಿ ಬಂದಿದ್ದಾರೆ. ರಜತ್ ಆರಂಭದಿಂದಾನು ಒಳ್ಳೆ ರೌಡಿಸಂ ತೋರಿಸುವ ರೀತಿಯೇ ಆಟವಾಡುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇರಬೇಕು

ನಿತ್ಯ ವಿದ್ಯಾರ್ಥಿಯಾಗಿರುವವನೆ ಅತ್ಯುತ್ತಮ ಶಿಕ್ಷಕ : ಪ್ರೊ.ಹೆಚ್.ಎ.ಭಿಕ್ಷಾವರ್ತಿಮಠ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 23 : ನಿತ್ಯ ವಿದ್ಯಾರ್ಥಿಯಾಗಿರುವವನೆ ಅತ್ಯುತ್ತಮ ಶಿಕ್ಷಕ. ಕೇವಲ ಪದವಿ ಪಡೆದರೆ ಸಾಲದು. ಶಿಕ್ಷಣದ

error: Content is protected !!