ಮುಂಬೈ : ಲಖಿಂಪುರ ಕೇರಿಯಲ್ಲಿ ರೈತರ ಮೇಲೆ ಕಾರು ಹತ್ತಿಸಿ, ರೈತರು ಪ್ರಾಣ ಕಳೆದುಕೊಳ್ಳುವಂತಾಗಿತ್ತು. ಇದೀಗ ಅವರ ಆತ್ಮಕ್ಕೆ ಶಾಂತಿಗಾಗಿ ‘ಅಸ್ತಿ ಕಲಶ ರ್ಯಾಲಿ’ಯನ್ನ ಆಯೋಜನೆ ಮಾಡಲಾಗಿದೆ. ನವೆಂಬರ್ 27 ರಂದು ಈ ರ್ಯಾಲಿ ನಡೆಯಲಿದೆ.
ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕ ನವಾಬ್ ಮಲಿಕ್ ಮಾತನಾಡಿದ್ದು, ಲಖೀಂಪುರ ಕೇರಿ ಗ್ರಾಮದಲ್ಲಿ ಪ್ರಾಣ ಕಳೆದು ರೈತರಿಗಾಗಿ ಈ ರ್ಯಾಲಿ ಆಯೋಜನೆ ಮಾಡಲಾಗಿದೆ ನ.28 ರಂದು ಆಜಾದ್ ಮೈದಾನದಲ್ಲಿ ನಡೆಯುವ ರ್ಯಾಲಿಗೆ ನಮ್ಮ ಬೆಂಬಲವಿರುತ್ತದೆ. ಯಾವುದೇ ರಾಜಕೀಯ ವ್ಯಕ್ತಿಗಳು ಆ ರ್ಯಾಲಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
2020ರಲ್ಲಿ ಕೇಂದ್ರವು ರೈತರಿಗಾಗಿ ಮೂರು ಕಾನೂನುಗಳನ್ನು ಜಾರಿಗೆ ತಂದಿತ್ತು. ಆದರೆ ರೈತರು ಈ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದರು. ಇದೀಗ ಅವರಿಗಾಗಿ ಅಸ್ತಿ ಕಲಶ ರ್ಯಾಲಿ ಆಯೋಜನೆ ಮಾಡಲಾಗಿದೆ.