Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಾಯಿ ಹಾಗೂ ಶಿಶು ಮರಣ ಪ್ರಮಾಣ ತಗ್ಗಿಸಲು ಕ್ಷಿಪ್ರ ಕಾರ್ಯಪಡೆ ರಚನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

Facebook
Twitter
Telegram
WhatsApp

 

ಚಿತ್ರದುರ್ಗ. ಅ.16: ಹೆರಿಗೆ ತುರ್ತು ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಹಾಗೂ ಶಸ್ತ್ರ ಚಿಕಿತ್ಸೆ ಕೈಗಳು ಜಿಲ್ಲಾ ಆಸ್ಪತ್ರೆಯಲ್ಲಿ ಅಗತ್ಯ ತಜ್ಞ ವೈದ್ಯರು ಸೇರಿದಂತೆ ಸಿಬ್ಬಂದಿಗಳ ಕ್ಷಿಪ್ರ ಕಾರ್ಯ ಪಡೆ ತಂಡವನ್ನು ರಚನೆ ಮಾಡಬೇಕು. ಈ ತಂಡ 24*7 ಚಿಕೆತ್ಸೆಗೆ ಲಭ್ಯವಿರಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಆರೋಗ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ರಾಜ್ಯ ಸರಾಸರಿಗಿಂತಲೂ ಹೆಚ್ಚಿಗೆ ತಾಯಿ ಹಾಗೂ ಶಿಶು ಮರಣ ಪ್ರಮಾಣವಿದೆ. ಇದನ್ನು ತಗ್ಗಿಸಬೇಕು. ಜಿಲ್ಲಾ ಆಸ್ಪತ್ರೆಯ ಆಡಳಿತವನ್ನು ಸುಧಾರಿಸಿ, ಎಲ್ಲಾ ವಿಭಾಗಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಹೆರಿಯ ತುರ್ತು ಸಂದರ್ಭದಲ್ಲಿ ರಕ್ತ ನಿಧಿ ಕೇಂದ್ರಗಳು ಹಣ ಹಾಗೂ ಬದಲಿ ರಕ್ತ ನೀಡಲು ಒತ್ತಾಯ ಮಾಡಬಾರದು. ತಾಯಿಂದರ ಮರಣಕ್ಕೆ ರಕ್ತದ ಅಲಭ್ಯತೆ ಕಾರಣವಾಗಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ವೈದ್ಯರು ಜವಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು. ತಾಯಿ ಹಾಗೂ ಶಿಶು ಮರಣಗಳು ಜಿಲ್ಲೆಯಲ್ಲಿ ಮರುಳಿಸಬಾರದು. ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಗರ್ಭಿಣಿಯರ ಸ್ಥಿತಿ ತೀರಾ ಚಿಂತಾಜನಕ ಎನಿಸಿದಾಗ ಇತರೆ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಲಾಗುತ್ತಿದೆ. ಇದರಿಂದ ಚಿತ್ಸೆಯ ಸುರ್ವಣ ಗಳಿಗೆ ತಪ್ಪಿ ಹೋಗಿ ಗರ್ಭಿಣಿ ತಾಯಂದಿರು ಮರಣ ಹೊಂದುವ ಪರಿಸ್ಥಿತಿ ಎದುರಾಗುತ್ತದೆ. ಇದರ ಬದಲಿಗೆ ಪರಿಸ್ಥಿತಿ ಅವಲೋಕಿ ಮುಂಚಿತವಾಗಿ ಬೆಂಗಳೂರು, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಬೇಕು. ಹೀಗೆ ಶಿಫಾರಸ್ಸು ಮಾಡುವ ಗರ್ಭಿಣಿಯರನ್ನು ಕೊಂಡಯ್ಯಲು ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ಜಿಲ್ಲಾ ಆಸ್ಪತ್ರೆಯಿಂದಲೇ ಮಾಡಬೇಕು. ಆಂಬ್ಯುಲೆನ್ಸ್ನಲ್ಲಿ ಎಲ್ಲಾ ಜೀವ ರಕ್ಷಕ ಸಾಧನಗಳೊಂದಿಗೆ ವೈದ್ಯರು ಸಹ ಗರ್ಭಿಣಿಯರೊಂದಿಗೆ ತೆರಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.
ನಿರ್ಲಕ್ಷö್ಯದಿಂದ ತಾಯಿ ಮರಣ ಉಂಟಾದರೆ ಸಂಬAಧಪಟ್ಟವರ ವಿರುದ್ದ ಎ.ಎಫ್.ಐ.ಆರ್ ದಾಖಲಸಿ ಕ್ರಿಮಿನಲ್ ಮುಕದ್ದಮೆ ಹೂಡಿ ಕಠಣ ಕ್ರಮ ಕೈಗೊಳ್ಳಾಗುವುದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

 

ಚಿತ್ರದುರ್ಗ ಜಿಲ್ಲೆಯಲ್ಲಿ ಜನವರಿಯಿಂದ ಸೆಪ್ಟಂಬರ್‌ವರೆಗೆ 8934 ಹೆರಿಗೆ ಮಾಡಿಸಲಾಗಿದೆ. ಇದರಲ್ಲಿ 5975 ಹೆರಿಗೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಆಗಿವೆ. 2956 ಖಾಸಗಿ ಆಸ್ಪತ್ರೆಯಲ್ಲಿಯಾಗಿವೆ. ಶೇ.100 ರಷ್ಟು ಸಾಂಸ್ಥಿಕ ಹೆರಿಗಳನ್ನು ಮಾಡಲಾಗಿದೆ. ಒಟ್ಟು 7 ತಾಯಂದಿರ ಮರಣ ಸಂಭಸಿದೆ. ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣ ಪ್ರತಿ ಲಕ್ಷ ಜನಸಂಖ್ಯೆಗೆ 78.85 ಇದೆ. ಶಿಶು ಮರಣ ಪ್ರಮಾಣ ಪ್ರತಿ ಸಾವಿರ ಶಿಶುಗಳಿಗೆ 13 ಇದೆ. 3060 ಲ್ಯಾಕ್ರೋಸ್ಕೋಫಿ ಹಾಗೂ 7 ವ್ಯಾಸ್ಕೋಟಮಿ ಸಂತಾನಹರಣ ಚಿಕಿತ್ಸೆ ಮಾಡಲಾಗಿದೆ ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್ ಸಭೆಯಲ್ಲಿ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಶಸ್ತçಚಿಕಿತ್ಸಕ ಡಾ.ರವೀಂದ್ರ ಸೇರಿದಂತೆ ಆರೋಗ್ಯ ಹಿರಿಯ ವೈದ್ಯಾಧಿಕಾರಿಗಳು, ತಜ್ಞ ವೈದ್ಯರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀರ್ಣ, ಮಲಬದ್ಧತೆ ಸಮಸ್ಯೆನ್ನು ಎಂದಿಗೂ ನಿರ್ಲಕ್ಷಿಸಬೇಡಿ : ಇದು ಹೃದಯಕ್ಕೆ ತೊಂದರೆ

ನಮ್ಮ ದೇಹದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೂ ಕೆಲವೊಂದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಸುಮಾರು ಜನಕ್ಕೆ ಅಜೀರ್ಣ ಹಾಗೂ ಮಲಬದ್ಧತೆಯ ಸಮಸ್ಯೆ ಕಾಡುತ್ತಿರುತ್ತದೆ. ಇದು ಕಾಮನ್ ತಾನೇ ಎಂದು ನಿರ್ಲಕ್ಷ್ಯ ಮಾಡಿದರೆ ಅದರಿಂದ ಮುಂದೆ ಹೃದಯಕ್ಕೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ: ಈ ರಾಶಿಯವರಿಗೆ ಒಳ್ಳೆಯ ಸಂಬಂಧ ಮದುವೆಗೆ ಒಲೆಯಲಿದೆ ಶುಕ್ರವಾರರಾಶಿ ಭವಿಷ್ಯ -ನವೆಂಬರ್-22,2024 ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

error: Content is protected !!