Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಗೆ ಕಾಡುತ್ತಿದೆ ವಿಪರೀತ ಬೆನ್ನು ನೋವು : ಜೈಲು ಅಧಿಕಾರಿಗಳ ನಿರ್ಧಾರವೇನು..?

---Advertisement---

 

 

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ದರ್ಶನ್, ಜಾಮೀನು ಅರ್ಜಿ ನಿರಾಕರಣೆಯಾಗಿದ್ದು, ಹೈಕೋರ್ಟ್ ಮೆಟ್ಟಿಲೇರುವ ನಿರ್ಧಾರ ಮಾಡಿದ್ದಾರೆ. ಇದರ ನಡುವೆ ದರ್ಶನ್ ಅವರಿಗೆ ವಿಪರೀತ ಬೆನ್ನು ನೋವು ಕಾಣಿಸಿಕೊಂಡಿದೆ. ಬಳ್ಳಾರಿ ಜೈಲಿಗೆ ಶಿಫ್ಟ್ ಆದಾಗಿನಿಂದ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಸ್ಕ್ಯಾನಿಂಗ್ ಮಾಡಿಸಿಕೊಳ್ಳಿ ಎಂದರೂ ಮಾಡಿಸಿಕೊಳ್ಳಲು ಒಪ್ಪುತ್ತಿಲ್ಲ. ಅತ್ತ ಜಾಮೀನು ಸಿಗುತ್ತಿಲ್ಲ. ಹೀಗಾಗಿ ಜೈಲಿನಲ್ಲಿ ದರ್ಶನ್ ಗಾಗಿ ಸೌಲಭ್ಯಗಳನ್ನೇ ಹೆಚ್ಚು ಮಾಡಿದ್ದಾರೆ.

ದರ್ಶನ್ ಅವರ ಮೆಡಿಕಲ್ ರಿಪೋರ್ಟ್ ನಲ್ಲಿ ವಿಮ್ಸ್ ನ್ಯೂರೋ ಸರ್ಜನ್ ಡಾ.ವಿಶ್ವನಾಥ್ ಅವರು, ಮೆಡಿಕಲ್ ಬೆಡ್ ಮತ್ತು ದಿಂಬು ನೀಡುವಂತೆ ಸಲಹೆ ನೀಡಿದ್ದರು. ಇದೀಗ ವೈದ್ಯರ ಸಲಹೆಯಂತೆ ಬಳ್ಳಾರಿ ಜೈಲಿಗೆ ಮೆಡಿಕಲ್ ದಿಂಬು ಮತ್ತು ಬೆಡ್ ನೀಡಲಾಗಿದೆ‌. ಜಿಲ್ಲಾಸ್ಪತ್ರೆಯಿಂದ ತರಿಸಿ ಕೊಡಲಾಗಿದೆ. ಮೇಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ತರಿಸಿ ಕೊಡಲಾಗಿದೆ.

ಇನ್ನು ದರ್ಶನ್ ಗ್ಯಾಂಗ್ ಕಡೆಯಿಂದ ಕೊಲೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಮಗು ಆಗಿದೆ. ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಜಾಮೀನಿಗಾಗಿ ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಜಾಮೀನು ನೀಡಲು ನಿರಾಕರಣೆ ಮಾಡಿತ್ತು. ಶಕ್ತಿ ಪೀಠಗಳಿಗೆಲ್ಲ ಹೋಗಿ ಬಂದಿದ್ದ ವಿಜಯಲಕ್ಷ್ಮೀ ಅವರಿಗೂ ಈ ಬಾರಿ ಜಾಮೀನು ಸಿಗಬಹುದು ಎಂಬ ನಿರೀಕ್ಷೆ ಇತ್ತು. ದರ್ಶನ್ ಅವರು ಕೂಡ ಜಾಮೀನು ಸಿಗುವ ಭರವಸೆಯಲ್ಲಿದ್ದರು. ಆದರೆ ಅದೆಲ್ಲವೂ ಹುಸಿಯಾಗಿದೆ. ಜಾಮೀನಿಗಾಗಿ ದರ್ಶನ್ ಹೈಕೋರ್ಟ್ ಮೆಟ್ಡಿಲೇರಲು ನಿರ್ಧಾರ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment