ರಾಜ್ಯ ಮಟ್ಟದ ಹೆಚ್.ಎನ್.ಪ್ರಶಸ್ತಿಗೆ ಡಾ.ಶಿವಮೂರ್ತಿ ಶರಣರ ಆಯ್ಕೆ

1 Min Read

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ, (ನ.25): ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‍ನ ರಾಜ್ಯ ಮಟ್ಟದ ಹೆಚ್.ಎನ್.ಪ್ರಶಸ್ತಿಗೆ ಮುರುಘಾಮಠದ ಡಾ.ಶಿವಮೂರ್ತಿ ಶರಣರನ್ನು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಮೌಢ್ಯದ ವಿರುದ್ದ ಜನತೆಯಲ್ಲಿ ಜಾಗೃತಿ ಮೂಡಿಸುತ್ತಿರುವ ಮುರುಘಾ ಶರಣರು ಅಮಾವಾಸೆಯಲ್ಲಿ ವಿವಾಹ, ಗ್ರಹಣದಲ್ಲಿ ಉಪಹಾರ ಸೇವನೆ, ಸ್ಮಶಾನಗಳಲ್ಲಿನ ಮೂಢನಂಬಿಕೆಗೆ ಕಡಿವಾಣ ಹಾಕುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದರಿಂದ ರಾಜ್ಯ ಮಟ್ಟದ ಹೆಚ್.ಎನ್.ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ವೈಜ್ಞಾನಿಕ ಸಂಶೋಧನಾ ಪರಿಷತ್‍ನ ರಾಜ್ಯಾಧ್ಯಕ್ಷರಾದ ಡಾ.ಹುಲಿಕಲ್ ನಟರಾಜ್ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ನೇತೃತ್ವದಲ್ಲಿ ಮುರುಘಾಮಠಕ್ಕೆ ತೆರಳಿ ಡಿ.28 ಮತ್ತು 29 ರಂದು ನಡೆಯಲಿರುವ ರಾಜ್ಯ ಮಟ್ಟದ ವಿಚಾರ ಗೋಷ್ಟಿಯಲ್ಲಿ ಪ್ರಶಸ್ತಿ ಸ್ವೀಕರಿಸುವಂತೆ ಮುರುಘಾಶರಣರನ್ನು ಆಹ್ವಾನಿಸಿದರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‍ನ ಕಾರ್ಯದರ್ಶಿ ಪಿ.ಲೋಕೇಶ್, ಜಿಲ್ಲಾಧ್ಯಕ್ಷ ನಾಗರಾಜ್ ಸಂಗಂ, ಪದಾಧಿಕಾರಿಗಳಾದ ಎಂ.ರಂಗಪ್ಪ, ಲವಕುಮಾರ್, ಖಜಾಂಚಿ ಬಿ.ಎ.ಬಸವರಾಜ್ ಈ ಸಂದರ್ಭದಲ್ಲಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *