ಬೆಂಗಳೂರು: ಗೋಪಾಲ್ ಜೋಶಿಯವರ ವಿರುದ್ಧ ದಾಖಲಾದ ಕೇಸ್ ಸಂಬಂಧ ಸಚಿವ ದಿನೇಶ್ ಗುಂಡೂರಾವ್, ಇದೀಗ ಪ್ರಹ್ಲಾದ್ ಜೋಶಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ನೀವೂ ಮೊದಲು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದೇ ಆಗ್ರಹಿಸಿದ್ದಾರೆ.
ಪ್ರಹ್ಲಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯವರ ವಿರುದ್ಧ ಟಿಕೆಟ್ ವಂಚನೆ ಪ್ರಕರಣ ಸಂಬಂಧ ದೂರು ದಾಖಲಾಗಿದೆ. ಗೋಪಾಲ್ ಜೋಶಿಯವರು ಪ್ರಹ್ಲಾದ್ ಜೋಶಿಯವರ ಜೊತೆಗೆ ಇದ್ದಾರೆ ಎಂಬುದು ಇಡೀ ಹುಬ್ಬಳ್ಳಿ ಮಂದಿಗೇನೆ ಗೊತ್ತಿದೆ. ಸಹೋದರ ಗೋಪಾಲ ಜೋಶಿ ಮೇಲೆ ಬಂದಿರುವ ಆರೋಪಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿ ನುಣುಚಿಕೊಳ್ಳುತ್ತಿದ್ದಾರೆ. ಈ ನಡವಳಿಕೆ ಸರಿಯಲ್ಲ. ನೈತಿಕ ಹೊಣೆ ಹೊತ್ತು ಮೊದಲು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮಾಜಿ ಶಾಸಕ ದೇವಾನಂದ ಚೌಹಾಣ್ ತುಂಬಾ ಗೌರವಯುತವಾದ ವ್ಯಕ್ಯಿ. ಅವರಿಗೇನೆ ಲೋಕಸಭೆ ಚುನಾವಣೆಯ ಟಿಕೆಟ್ ಕೊಡಿಸುವುದಾಗಿ ಗೋಪಾಲ್ ಜೋಶಿ ನಂಬಿಸೊ, 2 ಕೋಟಿ ವಂಚನೆ ಮಾಡಿದ್ದಾರೆ.

ಈ ಸಂಬಂಧ ದೇವಾನಂದ ಚೌಹಾಣ್ ದಾಖಲೆ ನೀಡಿದ್ದಾರೆ. ಪ್ರಹ್ಲಾದ್ ಜೋಶಿಯವರ ಪ್ರಭಾವ ಬಳಸಿಕೊಂಡು ವಂಚನೆ ಮಾಡಲಾಗಿದೆ. ಅಷ್ಟೇ ಅಲ್ಲ ಅಮಿತ್ ಶಾ ಅವರ ಹೆಸರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಇಡಿ, ಐಟಿಯವರನ್ನು ಛೂ ಬಿಟ್ಟು ದೇವಾನಂದ ಚೌಹಾಣ್ ಅವರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದರು. ಈಗ ಟಿಕೆಟ್ ಕೊಡಿಸುತ್ತೇನೆಂದು ಹೇಳಿ ಎರಡು ಕೋಟಿ ವಂಚಿಸಿದ್ದಾರೆ. ಗೋಪಾಲ್ ಚೌಹಾಣ್ ಅವರು ಆರ್ ಎಸ್ ಎಸ್ ನಲ್ಲಿ ತೊಡಗಿಸಿಕೊಂಡವರು. ಆರ್ ಎಸ್ ಎಸ್ ನಲ್ಲಿ ತೊಡಗಿಕೊಂಡ ಹಲವರು ಈ ರೀತಿಯ ಟಿಕೆಟ್ ಕೊಡಿಸುವ ದಂಧೆಯಲ್ಲಿ ತೊಡಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









