Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಹಿರಿಯೂರು | ಗೋಡೆ ಕುಸಿದು ವೃದ್ದೆ ಸಾವು

---Advertisement---

 

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 21 : ನಿರಂತರ ಸುರಿದ ಮಳೆಯಿಂದ ಮನೆಯ ಗೋಡೆ ಕುಸಿದು ತಾಲ್ಲೂಕಿನ ಧರ್ಮಪುರ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದ ವಾಸಿ ಮೀನಾಕ್ಷಮ್ಮ (63 ವರ್ಷ) ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಘಟನೆ ವಿವರ : ತಾಲ್ಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಾಸದ ಮನೆಯ ಗೋಡೆ ನೆನೆದು ಇಂದು (ಸೋಮವಾರ) ಮಧ್ಯಾಹ್ನ 12.00 ಗಂಟೆಗೆ ಮನೆ ಕುಸಿದು ಮೀನಾಕ್ಷಮ್ಮನವರ ಮೇಲೆ ಬಿದ್ದಿದೆ. ತಕ್ಷಣವೇ ಗಾಯಗೊಂಡ ಅವರನ್ನು ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಧರ್ಮಪುರ ಹೋಬಳಿಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾ.ಅ.ಅ. ಬ್ಯಾಡರಹಳ್ಳಿ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment