Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಗ್ರಾಮ ಪಂಚಾಯಿತಿ ಪಿಡಿಒ ಅಮಾನತು

Facebook
Twitter
Telegram
WhatsApp

ಚಿತ್ರದುರ್ಗ. ಅ.22: ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯ ನಿರ್ಲಕ್ಷ್ಯತೆ ಸಂಬಂಧ ಚಳ್ಳಕೆರೆ ತಾಲ್ಲೂಕು ನೇರಲಗುಂಟೆ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಹನುಮಂತ ಕುಮಾರ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ನೇರಲಗುಂಟೆ ಪಿಡಿಒ ಎಸ್.ಹನುಮಂತಕುಮಾರ್ ಅವರು ಗ್ರಾಮ ಪಂಚಾಯಿತಿ ಕಚೇರಿ ಕರ್ತವ್ಯಕ್ಕೆ 2024ರ ಸೆಪ್ಟೆಂಬರ್ 30 ರಿಂದ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ. ಸಾರ್ವಜನಿಕರ ಕುಂದುಕೊರತೆಗಳಿಗೆ  ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ದೂರವಾಣಿ ಕರೆ ಮಾಡಿದರೂ ಸಹ ಸ್ವೀಕರಿಸದೇ ಇರುವುದರಿಂದ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಅಡಚಣೆ ಉಂಟಾಗಿದ್ದು, ಇವರನ್ನು ಬದಲಾವಣೆ ಮಾಡಿ ಅದೇ ಗ್ರಾಮ ಪಂಚಾಯಿತಿಯ ಗ್ರೇಡ್-1 ಕಾರ್ಯದರ್ಶಿ ಕೆ.ಎಸ್.ಜಯಣ್ಣ ಅವರಿಗೆ ಪ್ರಭಾರ ವ್ಯವಸ್ಥೆ ಮಾಡಿಕೊಡಲು ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಕೋರಿದ್ದು, ಅದರಂತೆ, ನೇರಲಗುಂಟೆ ಗ್ರಾ. ಪಂ ಹಾಜರಾತಿ ಪರಿಶೀಲಿಸಲಾಗಿ ಈ ನೌಕರರು 2024ರಿಂದ  ಇಲ್ಲಿಯವರೆಗೂ ಪೂರ್ವಾನುಮತಿ ಪಡೆಯದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿರುವುದು ಕಂಡುಬಂದಿರುತ್ತದೆ. ಈ ಹಿಂದೆಯೂ ಸಹ ಅನಧಿಕೃತವಾಗಿ ಗೈರು ಹಾಜರಾಗಿದ್ದು, ಅದೇ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ. ಪಿಡಿಒ ಎಸ್.ಹನುಮಂತಕುಮಾರ್ ಅವರು ವಿರುದ್ಧ ಶಿಸ್ತುಕ್ರಮಕೈಗೊಳ್ಳಲು, ಆಡಳಿತಾತ್ಮಕ ಹಿತದೃಷ್ಠಿಯಿಂದ ಗ್ರೇಡ್-1 ಕಾಯದರ್ಶಿ ಕೆ.ಎಸ್.ಜಯಣ್ಣ ಅವರಿಗೆ ನೇರಲಗುಂಟೆ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಯ ಪ್ರಭಾರ ವ್ಯವಸ್ಥೆ ಮಾಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ವರದಿ ನೀಡಿರುತ್ತಾರೆ.

ಈ ಹಿನ್ನಲೆಯಲ್ಲಿ ಎಲ್ಲಾ ಅಂಶಗಳನ್ನು ಪರಿಶೀಲಿಸಿ ನೇರಲಗುಂಟೆ ಗ್ರಾಮ ಪಂಚಾಯಿತಿ ಪಿಡಿಒ ಎಸ್. ಹನುಮಂತಕುಮಾರ್ ಅವರು ಒಬ್ಬ ಜವಾಬ್ದಾರಿಯುತ ಸರ್ಕಾರಿ ನೌಕರರಾಗಿದ್ದುಕೊಂಡು, ಮೇಲಾಧಿಕಾರಿಗಳ ಅನುಮತಿ ಪಡೆಯದೇ ಕರ್ತವ್ಯಕ್ಕೆ ಗೈರು ಹಾಜರಾಗಿ ಕಚೇರಿಯ ದೈನಂದಿನ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟು ಮಾಡುವ ಮೂಲಕ ಸರ್ಕಾರಿ ನೌಕರರ ವೃತ್ತಿಗೆ ತರವಲ್ಲದ ರೀತಿ ವರ್ತಿಸಿ, ಕರ್ನಾಟಕ ನಾಗರೀಕ ಸೇವಾ (ನಡವಳಿ) ನಿಯಾವಳಿಗಳು 3(i), (ii) ಮತ್ತು (iii) ಅನ್ನು ಉಲ್ಲಂಘಿಸಿರುವುದು ಕಂಡು ಬಂದಿರುವ ಕಾರಣ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅಮಾನತ್ತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!