Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

 

ಬೆಂಗಳೂರು, ಅಕ್ಟೋಬರ್ 25: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಪಕ್ಷ ಉಪಚುನಾವಣೆಗೆ ಸನ್ನದ್ಧವಾಗಿದ್ದು , ಮೂರು ಕ್ಷೇತ್ರಗಳಿಗೆ ಸಮರ್ಥರಾದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ ಎಂದರು.

ಕೇಂದ್ರ ಸಚಿವ ಕುಮಾರಸ್ವಾಮಿಯವರ ಭಾವನಾತ್ಮಕ ಚುನಾವಣಾ ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಭಾವನಾತ್ಮಕ ಭಾಷಣ, ಕಣ್ಣೀರುಗಳಿಗೆ ಜನರು ಮಾರುಹೋಗುವುದಿಲ್ಲ ಎಂದರು. ಶಿಗ್ಗಾಂವಿಯಲ್ಲಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರಿಂದ , ಅವರಿಗೇ ಈ ಬಾರಿ ಅವಕಾಶ ನೀಡಲಾಗಿದೆ. ಇದೇ ಪ್ರದೇಶದ ಸೈಯದ್ ಅಜೀಂಪೀರ್ ಖಾದ್ರಿಯವರು ಸಮರ್ಥ ನಾಯಕರಿದ್ದು, ಅವರು ಸಲ್ಲಿಸಿರುವ ನಾಮಪತ್ರವನ್ನು ವಾಪಸ್ಸು ಪಡೆಯುವಂತೆ ಮನವೊಲಿಸಲಾಗುವುದು ಎಂದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಪ್ರತಿಸ್ಪರ್ಧಿ, ವ್ಯಕ್ತಿ ಅಲ್ಲ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಠಾನ್ ಅವರು ಎದುರಾಳಿಯಾಗಿಲ್ಲದಿದ್ದಲ್ಲಿ ಕಳೆದ ಚುನಾವಣೆಯಲ್ಲಿ 60 ಸಾವಿರ ಮತಗಳನ್ನು ಪಡೆಯುತ್ತಿದ್ದರೇ? ಕಳೆದ ಬಾರಿ ಶಿಗ್ಗಾಂವಿಯಲ್ಲಿ ಬಿಜೆಪಿ ಜಯ ಸಾಧಿಸಿದ್ದರೂ, ಕಾಂಗ್ರೆಸ್ ಒಳ್ಳೆಯ ಸ್ಪರ್ಧೆಯನ್ನು ನೀಡಿತ್ತು. ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ 8000 ಮತಗಳ ಮುನ್ನಡೆಯನ್ನು ಕಾಂಗ್ರೆಸ್ ಸಾಧಿಸಿತ್ತು ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...