ಮಂಡ್ಯ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸುವ ಬರದಲ್ಲಿ ಮಾಜಿ ಸಂಸದ ಎಸ್ ಆರ್ ಶಿವರಾಮೇಗೌಡ ಜಿಲ್ಲೆಯ ಜನರ ಬಗ್ಗೆಯೇ ಮಾತನಾಡಿದ್ದಾರೆ. ಸದ್ಯ ಬಿಜೆಪಿಯಲ್ಲಿರುವ ಶಿವರಾಮೇಗೌಡ, ಕಾಂಗ್ರೆಸ್ ಸೇರುವ ಯೋಚನೆಯಲ್ಲಿದ್ದಾರೆ. ಕುಮಾರಸ್ವಾಮಿ ಅವರನ್ನು ವಿರೋಧಿಸುವ ಬರದಲ್ಲಿ ಮಂಡ್ಯದ ಗಂಡಸರು ಕೈಗೆ ಬಳೆ ತೊಟ್ಟುಕೊಳ್ಳಬಾರದು ಎಂದಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಶಿವರಾಮೇಗೌಡ ಅವರು, ರಾಮನಗರದಿಂದ ಕುಮಾರಸ್ವಾಮಿಯನ್ನು ಓಡಿಸಿದ್ದಾರೆ. ಆದರೆ ಮಂಡ್ಯದವರೆಲ್ಲ ನರಸತ್ತವರು ಎಂದು ಇಲ್ಲಿಗೆ ಬಂದಿದ್ದಾರೆ. ಜಿಲ್ಲೆಯ ಮುಖಂಡರು ಈಗಲಾದರೂ ಎಚ್ಚೆತ್ತುಕೊಳ್ಳಿ. ನಿಮ್ಮಲ್ಲೂ ಗಂಡಸರಿದ್ದಾರೆ.
ಹಾಸನದಿಂದ ಕರೆತಂದು ಮಂಡ್ಯದಲ್ಲಿ ಗಂಡಸರನ್ನಾಗಿ ಮಾಡುವ ಅಗತ್ಯವಿಲ್ಲ. ಗಂಡಸರಾಗ್ರಪ್ಪ ಕೈಗೆ ಬಳೆ ತೊಟ್ಟುಕೊಳ್ಳಬೇಡಿ ಎಂದು ಶಿವರಾಮೇಗೌಡ ಮಾತನಾಡಿದ್ದಾರೆ. ಈ ಮಾತುಗಳಿಗೆ ಈಗ ಬಿಜೆಪಿ, ಜೆಡಿಎಸ್ ಪಕ್ಷಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಶಿವರಾಮೇಗೌಡರು ನಾಲಿಗೆ ಹರಿಬಿಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಸದ್ಯ ಚನ್ನಪಟ್ಟಣದಲ್ಲಿ ಸ್ಪರ್ಧೆಯ ಕಾವು ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಈ ರೀತಿಯ ಮಾತು ಕುಮಾರಸ್ವಾಮಿ ಬಳಗದವರನ್ನು ಮತ್ತಷ್ಟು ಕೋಪಗೊಳ್ಳುವಂತೆ ಮಾಡಿದೆ.
ಸಿಪಿ ಯೋಗೀಶ್ವರದ ತಾನೂ ಜೆಡಿಎಸ್ ಚಿಹ್ನೆ ಹಿಡಿಯಲ್ಲ ಎಂದು ಹೇಳಿ ಕಾಂಗ್ರೆಸ್ ಸೇರಿದ್ದಾರೆ. ಇದರ ನಡುವೆ ಎರಡು ಬಾರಿ ಸೋತರು ಮೂರನೆ ಬಾರಿಯ ಗೆಲುವಿನ ನಿರೀಕ್ಷೆಗಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ಫೈನಲ್ ಮಾಡಿದ್ದಾರೆ. ಸದ್ಯ ನಿನ್ನೆಯಷ್ಟೇ ನಾಮಪತ್ರ ಸಲ್ಲಿಕೆ ಮಾಡಿದ್ದು, ನಿಖಿಲ್ ಕುಮಾರಸ್ವಾಮಿ ಜೊತೆಗೆ ಬಿಜೆಪಿಯ ಘಟಾನುಘಟಿ ನಾಯಕರೇ ನಿಂತಿದ್ದಾರೆ. ಅತ್ತ ಸಿಪಿ ಯೋಗೀಶ್ವರ್ ಗೆಲುವಿಗಾಗಿ ಕಾಂಗ್ರೆಸ್ ನಾಯಕರು ಹೋರಾಟ ಮಾಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಚುನಾವಣೆಯ ಬಿಸಿಯ ಹೊಗೆ ಆವರಿಸಿಕೊಂಡಿದೆ.