Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಿಜೆಪಿ ಸದಸ್ಯತ್ವ ಅಭಿಯಾನ : ಪಕ್ಷಕ್ಕೆ ಹೆಚ್ಚಿನ ಸದಸ್ಯರನ್ನು ಸೇರಿಸಿ : ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ. 27 : ಭಾರತೀಯ ಜನತಾ ಪಾರ್ಟಿ ದೇಶದಲ್ಲಿ 11 ಕೋಟಿ, ಕರ್ನಾಟಕ ರಾಜ್ಯದಲ್ಲಿ 60 ಲಕ್ಷ ಸದಸ್ಯರನ್ನು ಹೊಂದಿದೆ ಸದಸ್ಯತ್ವ ಮಾಡಲು ಇನ್ನು ಮೂರು ಇದೆ ಕಾಲವಾಕಾಶ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸದಸ್ಯರನ್ನಾಗಿ ಮಾಡುವಂತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕರೆ ನೀಡಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ನಡೆದ ಸಕ್ರಿಯ ಸದಸ್ಯರ ಅಭಿಯಾನದಲ್ಲಿ ಅರ್ಜಿಯನ್ನು ತುಂಬುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಚಿತ್ರದುರ್ಗ ನಗರದ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಬೂತ್‍ನಲ್ಲಿಯೂ ಮೂರು ಜನ ಸಕ್ರಿಯ ಕಾರ್ಯಕರ್ತರು ಇರಬೇಕಿದೆ ಯಾವ ಕಾರ್ಯಕರ್ತ ತನ್ನ ಬೂತ್ ನಲ್ಲಿ 50 ಜನರನ್ನು ಪಕ್ಷದ ಸದಸ್ಯರನ್ನಾಗಿ ಮಾಡುತ್ತಾರೋ ಅಂತಹರು ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗುತ್ತಾರೆ. ಇವರು ಮುಂದಿನ ದಿನದಲ್ಲಿ ಪಕ್ಷದ ವಿವಿಧ ರೀತಿಯ ಹುದ್ದೆಗಳನ್ನು ಅಲಂಕರಿಸಲು ಇದು ಸಹಾಯವಾಗುತ್ತದೆ ಎಂದರು.

ದೇಶದಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ ನಮ್ಮದಾಗಬೇಕಿದೆ ಇದಕ್ಕಾಗಿ ನಮ್ಮ ಪಕ್ಷದ ಕಾರ್ಯಕರ್ತರರು ಈ ದಿನದಲ್ಲಿ ಹೆಚ್ಚಿನ ಶ್ರಮವನ್ನು ಹಾಕುವುದರ ಮೂಲಕ ಸದಸ್ಯರನ್ನು ಮಾಡಬೇಕಿದೆ, ಇದು ಮುಂದಿನ ದಿನದಲ್ಲಿ ಬರುವ ಜಿಲ್ಲಾ.ತಾಲ್ಲೂಕು ಪಂಚಾಯಿತಿಗಳಿಗೆ ಅನುಕೂಲವಾಗಲಿದೆ. ಈ ಚುನಾವಣೆ ಕಾರ್ಯಕರ್ತರ ಚುನಾವಣೆಯಾಗಿದ್ದು ಇದಕ್ಕೆ ಈಗಿನಿಂದಲೇ ತಯಾರಿಯನ್ನು ಮಾಡಿಕೊಳ್ಳಬೇಕಿದೆ ಎಂದು ತಿಪ್ಪಾರೆಡ್ಡಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ವಕ್ತಾರ ನಾಗರಾಜ್ ಬೇದ್ರೇ, ಯುವ ಮೋರ್ಚಾದ ಅಧ್ಯಕ್ಷ ರಾಮು, ಹೆಚ್.ಎನ್. ಲೋಕೇಶ್ ಕುಮಾರ್, ಬಸಮ್ಮ, ಶಾಂತಮ್ಮ, ಕಿರಣ, ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...