ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ನಗರದ ಐಎಂಎ ಹಾಲ್ ನಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಶಾಖೆಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಕಾರ್ಯದರ್ಶಿಯಾಗಿ ಡಾ. ಪ್ರಹ್ಲಾದ್ ಎನ್. ಬಿ., ಖಜಾಂಚಿಯಾಗಿ ಡಾ. ಶಿಲ್ಪಾ ಚಂದ್ರಶೇಖರ್ ಆಯ್ಕೆಯಾಗಿದ್ದಾರೆ ಎಂದು ನಿಕಟ ಪೂರ್ವ ಅಧ್ಯಕ್ಷರಾದ ಡಾ. ಪಿ. ಟಿ. ವಿಜಯಕುಮಾರ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯದರ್ಶಿ ಡಾ. ಬಸವರಾಜ್ ಸೇರಿದಂತೆ ಮತ್ತಿತರ ಪದಾಧಿಕಾರಿಗಳು, ಹಿರಿಯ ವೈದ್ಯರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











