Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚನ್ನಪಟ್ಟಣ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಘುನಂದನ್ ಸಂಧಾನ ಸಫಲ : ಡಿಕೆ ಬ್ರದರ್ಸ್ ಮಾತುಗೆ ಒಪ್ಪಿಗೆ..!

Facebook
Twitter
Telegram
WhatsApp

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯ ಕಣ ಬಿಸಿಯಾಗಿದೆ. ದಳಪತಿಗಳ ಕ್ಯಾಂಡಿಡೇಟ್ ಅನ್ನ ಹೇಗಾದರು ಮಾಡಿ ಸೋಲಿಸಲೇಬೇಕೆಂದು ಡಿಕೆ ಬ್ರದರ್ಸ್ ಕಾಯ್ತಿದ್ದಾರೆ. ಅತ್ತ ಡಿಕೆ ಬ್ರದರ್ಸ್ ಪ್ಲ್ಯಾನ್ ಉಲ್ಟಾ ಮಾಡುವುದಕ್ಕಾಗಿ ಎಲ್ಲಾ ರೀತಿಯ ತಂತ್ರಗಳನ್ನು ಬಳಸಿ, ನಿಖಿಲ್ ಗೆಲುವಿಗಾಗಿ ದಳಪತಿಗಳು ಓಡಾಡುತ್ತಿದ್ದಾರೆ. ಇದರ ನಡುವೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘುನಂದನ್ ಮನವೊಲಿಸುವಲ್ಲೂ ಡಿಕೆ ಬ್ರದರ್ಸ್‌ ಯಶಸ್ವಿಯಾಗಿದ್ದಾರೆ.

ಮೈಸೂರು ಇನ್ಫ್ರಾಸ್ಟ್ರಕ್ಟರ್ ಕಾರಿಡಾರ್ ಪ್ಲ್ಯಾನಿಂಗ್ ಅಥಾರಿಟಿ ಅಧ್ಯಕ್ಷ ರಘುನಂದನ್ ಚನ್ನಪಟ್ಟಣದ ಉಪಚುನಾವಣೆಗೆ ಟಿಕೆಟ್ ಸಿಗುತ್ತೆ ಎಂದು ಭಾವಿಸಿದ್ದರು. ಆದರೆ ಡಿಕೆ ಬ್ರದರ್ಸ್ ಪ್ಲ್ಯಾನ್ ಬೇರೆ ಆಗಿತ್ತು. ದಳಪತಿ ಎದುರು ಹೋರಾಡುವ ಸ್ಪರ್ಧಿಯನ್ನೇ ಕಣಕ್ಕೆ ಇಳಿಸಿದರು. ಇದರಿಂದ ಬೇಸರಗೊಂಡಿದ್ದ ರಘುನಂದನ್ ರಾಮಣ್ಣ ಅವರನ್ನು ಸಮಾಧಾನಗೊಳಿಸುವಲ್ಲಿ ಡಿಕೆ ಬ್ರದರ್ಸ್ ಯಶಸ್ವುಯಾಗಿದ್ದಾರೆ.

ಇಂದು ಸದಾಶಿವನಗರದ ಡಿಕೆ ಶಿವಕುಮಾರ್ ನಿವಾಸದಲ್ಲಿ ಯೋಗೀಶ್ವರ್ ಅವರ ಮುಂದೆಯೇ ರಘಿನಂದನ್ ಸಂಧಾನ ಸಭೆ ನಡೆದಿದೆ. ಕಡೆಯಲ್ಲಿ ನಾನು ಯೋಗೀಶ್ವರ್ ಗೆಲುವಿಗಾಗಿ ಕೆಲಸ‌ಮಾಡುತ್ತೇನೆ ಎಂದು ರಘುನಂದನ್ ತಿಳಿಸಿದ್ದಾರೆ. ಅವರ ಪರವಾಗಿ ಪ್ರಚಾರ ನಡೆಸುತ್ತೇನೆ ಎಂದಿದ್ದಾರೆ. ರಘುನಂದನ್ ಕಳೆದ ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿದ್ದರು. ಈ ವೇಳೆ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದರು. ಚನ್ನಪಟ್ಟಣ ನಗರಸಭೆಯ 14 ಮಂದಿ ಹಾಗೂ ಜೆಡಿಎಸ್ ಪಕ್ಷದ ಇಬ್ಬರನ್ನು ಕಾಂಗ್ರೆಸ್ ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು. ಅಷ್ಟೇ ಅಲ್ಲ ತಾಲೂಕಿನಾದ್ಯಂತ ನೂರಾರು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರನ್ನು ಕಾಂಗ್ರೆಸ್ ಕಾರ್ಯಕರ್ತರನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದರು. ಮತಗಳು ಏರಿಕೆಯಾಗಿತ್ತು. 17 ಸಾವಿರ ಮತಗಳಿದ್ದದ್ದು 87 ಸಾವಿರಕ್ಕೆ ಏರಿಕೆಯಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

RCB ಸೇರ್ತಾರೆ ಅಂದುಕೊಂಡ್ರೆ ಕನ್ನಡಿಗ ರಾಹುಲ್ ಡೆಲ್ಲಿ ಪಾಲು..!

RCB ಕ್ರೇಜ್ ಎಷ್ಟಿದೆ‌ ಎಂಬುದನ್ನು ಬಿಡಿಸಿ ಹೇಳುವ ಅಗತ್ಯವಿಲ್ಲ. ಐಪಿಎಲ್ ಶುರುವಾಗುವ ಮುನ್ನವೇ ಆರ್ಸಿಬಿ ಫೀವರ್ ಅಭಿಮಾನಿಗಳಲ್ಲಿ ಜೋರಾಗಿ ಬಿಡುತ್ತದೆ. ಆರ್ಸಿಬಿ ಅಂದ್ರೆ ಅಷ್ಟು ಪ್ರೀತಿ ಕನ್ನಡಿಗರಿಗೆ. ಈಗ ಆರ್ಸಿಬಿ ಫ್ಯಾನ್ಸ್ ಖುಷಿ ಪಡೋ

error: Content is protected !!