Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೋಕಾಯುಕ್ತದಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

---Advertisement---

ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗೆ ಆಹ್ವಾನ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನವೆಂಬರ್ 29 ಕೊನೆಯ ದಿನವಾಗಿದೆ. ಶುಲ್ಕ ಕಟ್ಟಲು ನವೆಂಬರ್ 30 ಕೊನೆಯ ದಿನವಾಗಿದೆ. ಸಂಬಂಧ ಪಟ್ಟ ಇಲಾಖೆಯ ವೆಬ್ಸೈಟ್ ಮೂಲಕ ಅಂದ್ರೆ ಆನ್ಲೈನ್ ಮೂಲಕ ಅರ್ಜಿ ಹಾಕಬೇಕಾಗಿದೆ.

ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ವೇತನ ಶ್ರೇಣಿ ತಿಂಗಳಿಗೆ 34,100 ರಿಂದ ಹಿಡಿದು 67,600 ತನಕ ಇದೆ. ಪದವಿ ಪೂರ್ವ ಶಿಕ್ಷಣದಲ್ಲಿ ಪಾಸ್ ಆಗಿರಬೇಕು. ಹಾಗೇ ಕರ್ನಾಟಕ ಪ್ರೌಢಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲೂ ಪಾಸ್ ಆಗಿರಬೇಕು. ಅರ್ಜಿ ಹಾಕಿದವರ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಮೀಸಲಾತಿ ಆಧಾರದಲ್ಲಿ 1:10 ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ತಯಾರಿಸಲಾಗುತ್ತದೆ. ಈ ಪಟ್ಟಿಯಲ್ಲಿ ಶೇಕಡ 50 ರಷ್ಟು ಅಂಕಗಳನ್ನು ಪಡೆಯಲೇಬೇಕು. ಪಟ್ಟಿಯಲ್ಲಿ ಹೆಸರು ಪಡೆದವರಿಗೆ ಇಲಾಖೆ ಪರೀಕ್ಷೆ ನಡೆಸುತ್ತದೆ. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದವರಿಗೆ ಕೆಲಸ ಸಿಗಲಿದೆ.

ಸಾಮಾನ್ಯ ಅರ್ಹತೆ, 2A, 2B, 3A, 3B, ಮಾಜಿ ಸೈನಿಕರಿಗೆ ಅರ್ಜಿ ಶುಲ್ಕವನ್ನು 250 ನಿಗಧಿ‌ಮಾಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡ ಹಾಗೂ ವಿಶೇಷ ಚೇತನರಿಗೆ ಶುಲ್ಕದಲ್ಲಿ ವಿನಾಯಿತಿಯನ್ನು ಘೋಷಣೆ ಮಾಡಲಾಗುತ್ತದೆ. 18 ರಿಂದ 43 ವರ್ಷದ ಒಳಗಿನವರು ಅರ್ಜಿಯನ್ನು ಸಲ್ಲಿಕೆ ಮಾಡಬೇಕು. ಒಟ್ಟು 16 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. http://lokayukta.kar.nic.in ವೆಬ್ಸೈಟ್ ಗೆ ಭೇಟಿ ನೀಡ ಅರ್ಜಿ ಸಲ್ಲಿಕೆ ಮಾಡಬಹುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment