ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 05 : ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತಿನ ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಗೀತಾ ಭರಮಸಾಗರ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಶಾಖೆಯ ನಿರ್ದೇಶಕ ಸ್ಥಾನಕ್ಕೆ ಸೋಮವಾರ ನಾಮಪತ್ರ ಸಲ್ಲಿಸಿದರು.
ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬೆನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ, ಸಾಂಸ್ಕೃತಿಕ, ಸಾಹಿತ್ಯಿಕ ಪರಿಚಾರಕಿ, ಲೇಖಕಿ, ಸಂಪನ್ಮೂಲ ವ್ಯಕ್ತಿ ಚಿಂತಕಿಯಾಗಿರುವ ಗೀತಾ ಭರಮಸಾಗರ ಅವರು ಶಿಕ್ಷಣ ಇಲಾಖೆಯ ತಂಡದೊಂದಿಗೆ ಜಿಲ್ಲಾಧ್ಯಕ್ಷರಾದ ತಿಮ್ಮಾರೆಡ್ಡಿ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಅಧಿಕೃತವಾಗಿ ನಾಮ ಪತ್ರವನ್ನು ಚುನಾವಣಾ ಅಧಿಕಾರಿಗಳಾದ ಡಿ.ಟಿ. ಜಗನ್ನಾಥ್ ಅವರ ಪರವಾಗಿ ಬಿ ಆರ್ ಸಿ ಸಂಪತ್ ಕುಮಾರ್ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ತಿಮ್ಮಾರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಹಂತೇಶ್ , ತಾಲ್ಲೂಕು ಅಧ್ಯಕ್ಷರಾದ ಕೆಂಚಪ್ಪ, ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ ಜಿಲ್ಲಾಧ್ಯಕ್ಷರೂ, ವಕೀಲರಾದ ಮಾಲತೇಶ್ ಅರಸ್, ತಿಪ್ಪೇಸ್ವಾಮಿ, ವೀರೇಶ್ ಸುರೇಶ್, ಮಂಜುನಾಥ್ ಆಚಾರ್, ಯಲ್ಲಪ್ಪ, ತಾಜಿರ್ ಭಾಷ, ಪರ್ವೀನ್ ತಾಜ್, ವೀರಣ್ಣ, ದುರುಗೇಶಪ್ಪ, ರೂಪ, ತಿಪ್ಪೇರುದ್ರಪ್ಪ,ಹೊನ್ನಮ್ಮ, ಶಶಿಕಲಾ, ಚಿತ್ರಲತಾ, ಶಾರದಾ, ಮಹಂತೇಶ್, ಪದ್ಮಾ, ಸಾಂಸ್ಕೃತಿಕ ಚಿಂತಕ ಡಿ.ಓ. ಮುರಾರ್ಜಿ ಇತರರು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್