Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ವಿಧಾನ ಪರಿಷತ್ ಚುನಾವಣೆ: ಅಂತಿಮ ಕಣದಲ್ಲಿ ಮೂವರು ಅಭ್ಯರ್ಥಿಗಳು

Facebook
Twitter
Telegram
WhatsApp

ಚಿತ್ರದುರ್ಗ, (ನವೆಂಬರ್.26) : ಕರ್ನಾಟಕ ವಿಧಾನ ಪರಿಷತ್ ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ  ಉಮೇದುವಾರಿಕೆ ಹಿಂಪಡೆಯುವಿಕೆ ಕೊನೆಯ ದಿನದ ನಂತರ ಮೂವರು ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ನ.26 ರಂದು ಮಧ್ಯಾಹ್ನ 3ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಯಾವುದೇ ನಾಮಪತ್ರಗಳನ್ನು ಹಿಂಪಡೆಯಲಾಗಿಲ್ಲ. ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ 4 ಉಮೇದುವಾರರಿಂದ ಒಟ್ಟು 7 ನಾಮಪತ್ರಗಳು ಸ್ವೀಕೃತವಾಗಿದ್ದು, 01 ಉಮೇದುವಾರರ ನಾಮಪತ್ರ ತಿರಸ್ಕøತಗೊಂಡಿದ್ದು, ಎಲ್ಲಾ 3 ನಾಮಪತ್ರಗಳು ಕ್ರಮಬದ್ಧವಾಗಿ ಅಂಗೀಕಾರವಾಗಿರುತ್ತದೆ. ಅಂತಿಮ ಕಣದಲ್ಲಿ ಭಾರತೀಯ ಜನತಾ ಪಕ್ಷದ ನವೀನ್ ಕೆ.ಎಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸೋಮಶೇಖರ್ ಬಿ ಹಾಗೂ ಪಕ್ಷೇತರ ಅಭ್ಯರ್ಥಿ ಹನುಮಂತಪ್ಪ ಅವರು ಅಂತಿಮ ಕಣದಲ್ಲಿದ್ದಾರೆ ಎಂದು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!