Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕುಮಾರಸ್ವಾಮಿ ಮೇಲೆ ಎಫ್ಐಆರ್: ಕೇಂದ್ರ ಸಚಿವ ಹೆಚ್ಡಿಕೆ ಶಾಕಿಂಗ್ ರಿಯಾಕ್ಷನ್..?

---Advertisement---

ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಅದರಲ್ಲೂ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ನಡುವೆಯೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಕುಮಾರಸ್ವಾಮಿ ಶಾಕಿಂಗ್ ರಿಯಾಕ್ಷನ್ ನೀಡಿದ್ದಾರೆ.

ಇದು ಹಾಸ್ಯಾಸ್ಪದ ಅಲ್ಲದೆ ದುರುದ್ದೇಶದಿಂದ ಕೂಡಿದೆ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರಿನ ಆಧಾರದ ಮೇಲೆ ನನ್ನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಈ ವಿಚಾರ ಕೇಳಿನೆ ನನಗೆ ನಗು ಬರುತ್ತಿದೆ. ಈ ರಾಜ್ಯ ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ಇಂಥಹ ಇನ್ನು ನೂರು ಎಫ್ಐಆರ್ ಬೆಕಾದರೂ ಹಾಕಿಕಿಳ್ಳಲಿ. ನಾನು ಹೆದರುವುದಿಲ್ಲ. ಈ ಬೆದರಿಕೆಗಳಿಗೆ ದೃತಿಗೆಡುವುದಿಲ್ಲ. ಈಗ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮಾಡುತ್ತಿರುವ ದ್ವೇಷ ರಾಜಕೀಯಕ್ಕೆ ನಾನು ಕೋರ್ಟ್ ಮೂಲಕವೇ ಉತ್ತರ ನೀಡುತ್ತೇನೆ ಎಂದಿದ್ದಾರೆ.

ನಾನು ಮಾತನಾಡಿರುವ ವಿಡಿಯೋ ಇದೆ. ಅದನ್ನ ಇನ್ನೊಮ್ಮೆ ಬೇಕಾದರೂ ನೋಡಲಿ. ಎಫ್ಐಆರ್ ಕಾಪಿ ನೋಡಿದರೆ ದುರುದ್ದೇಶಪೂರ್ವಕವಾಗಿಯೇ ಹಾಕಿರುವುದು ಗೊತ್ತಾಗುತ್ತದೆ. ಪತ್ರಿಕಾಗೋಷ್ಠಿಯಲ್ಲಿ ಕುಮಾರಸ್ವಾಮಿ ಅವರು ಆ ವ್ಯಕ್ತಿಯ ಬಗ್ಗೆ ತಪ್ಪು ಮಾಹಿತಿ ನೀಡಿದ್ದೇನಂತೆ. ಈ ರೀತಿ ಎಫ್ಐಆರ್ ನಲ್ಲಿ ನಮೂದಿಸಿದ್ದಾರೆ. ಆ ವ್ಯಕ್ತಿಯ ಬಗ್ಗೆ ಏನು ಮಾತನಾಡಿದ್ದೀನಿ ಅಂತ ಇನ್ನೊಮ್ಮೆ ಬೇಕಾದರೂ ನೋಡಿಕೊಳ್ಳಲಿ. ಚನ್ನಪಟ್ಟಣದಲ್ಲಿ ಇವರ ಕುತಂತ್ರಗಳು, ಷಡ್ಯಂತ್ರಗಳು ವರ್ಕ್ ಆಗುವುದಿಲ್ಲ. ಇದೆಲ್ಲ ಗೊತ್ತಾದ ಮೇಲೆ ಈ ರೀತಿಯ ಹೊಸ ಪ್ಲ್ಯಾನ್ ಮಾಡುತ್ತಿದ್ದಾರೆ. ನಮ್ಮ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment