ಮೂಡಾ ಕೇಸ್: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ

suddionenews
1 Min Read

 

ಮೈಸೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲವೆಬ್ಬಿಸಿದ್ದ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ಕಚೇರಿಗೆ ಹಾಜರಾಗಿದ್ದಾರೆ‌‌. ಮೂಡಾ ಹಗರಣದಲ್ಲಿ ಒಟ್ಟು ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದರಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಎ1 ಆರೋಪಿ ಸ್ಥಾನದಲ್ಲಿದ್ದರು. ಇಂದು ಲೋಕಾಯುಕ್ತದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೋಲಾಹಲವೇ ಎದ್ದಿತ್ತು. ವಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆಯೂ ಆಗ್ರಹಿಸಿ, ಹೋರಾಟ ನಡೆಸಿದ್ದರು. ಬಳಿಕ ಸಿದ್ದರಾಮಯ್ಯ ಅವರ ಧರ್ಮ ಪತ್ನಿ ಪಾರ್ವತಿ ಅವರು ಆ ನಿವೇಶನಗಳನ್ನು ವಾಪಾಸ್ ಕೂಡ ಮಾಡಿದ್ದರು. ಮೂಡಾದಲ್ಲಿ 50-50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣ ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇಂದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟೀಸ್ ನೀಡಿದ್ದರು. ಅದರಂತೆ ಸಿಎಂ ಸಿದ್ದರಾಮಯ್ಯ ಅವರು ನೋಟೀಸ್ ಸಮಯದಂತೆ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರು ವಿಚಾರಣೆಗೆ ಬರುವುದು ತಿಳಿದು ಲೋಕಾಯುಕ್ತ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಲೋಕಾಯುಜ್ತ ಕಚೇರಿ ಸುತ್ತಮುತ್ತ ಹಾಗೂ ಕಚೇರಿಗಳನ್ನು ಪ್ತವೇಶಿಸುವ ಮಾರ್ಗಗಳಲ್ಲಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿತ್ತು. ಲೋಕಾಯುಕ್ತ ಕಚೇರಿಯ ಸಮೀಪದಲ್ಲಿ ಸಾರ್ವಜನಿಕರ ಓಡಾಟ, ವಾಹನಗಳ ಓಡಾಟಕ್ಕೆ ನಿಷೇಧ ಹೇರಲಾಗಿದೆ‌. ಈ ಮೂಲಕ ಕೆಎಸ್ಆರ್ಪಿ ಹಾಗೂ ಸಿಎಆರ್ ತುಕಡಿಗಳನ್ನು ಬಳಕೆ ಮಾಡಿಕೊಂಡು ಭದ್ರತೆಯನ್ನು ಹೆಚ್ವಿಸಿದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *