ಸುದ್ದಿಒನ್, ಚಿತ್ರದುರ್ಗ, ನವೆಂಬರ್. 07 : ನಗರದ ಬಿ.ಎಲ್. ಗೌಡ ಲೇಔಟ್ ನಿವಾಸಿ. ಕೆ.ಆರ್. ಸುರೇಶ್ ರೆಡ್ಡಿ (58 ವರ್ಷ) ಇಂದು(ಗುರುವಾರ) ಬೆಳಿಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.










