Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕೀಯ ನಿವೃತ್ತಿ ವಿಚಾರಕ್ಕೆ ಪಿಎಂ ಮೋದಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ..!

Facebook
Twitter
Telegram
WhatsApp

ಬೆಂಗಳೂರು: ಪ್ರಧಾನಿ ಮೋದಿಯವರು ಇತ್ತಿಚೆಗೆ ಕಾಂಗ್ರೆಸ್ ಮೇಲೆ ಆರೋಪವೊಂದನ್ನು ಮಾಡಿದ್ದರು. ಅಬಕಾರಿ ಇಲಾಖೆಯಿಂದ 700 ಕೋಟಿ ತಂದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ಮಾಡುತ್ತಿದೆ ಎಂದು. ಈ ವಿಚಾರಕ್ಕೆ‌ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಗರಂ ಆಗಿದ್ದು, ಪ್ರಧಾನಿ ಮೋದಿಯವರಿಗೆ ನಿವೃತ್ತಿಯ ಸವಾಲೆಸೆದಿದ್ದಾರೆ.

ಸುಳ್ಳುಗಾರ ಪ್ರಧಾನಿ ಮೋದಿಯವರು ನಮ್ಮ ಮೇಲೆ ಹಸಿ ಹಸಿ ಸುಳ್ಳು ಆರೋಪ ಮಾಡಿದ್ದಾರೆ. ಮೋದಿ ಅವರು ಹೇಳಿದ್ದು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಇಲ್ಲದೆ ಇದ್ದರೆ ನೀವೂ ನಿವೃತ್ತಿ ಘೋಷಿಸ್ತೀರಾ ಎಂದು ಸವಾಲು ಹಾಕಿದ್ದಾರೆ. ಮೋದಿಯವರು ಕುಟುಂಬ ರಾಜಕಾರಣದ ಬಗ್ಗೆ ಭಯಾನಕ ಭಾಷಣ ಮಾಡುತ್ತಾರೆ. ಆದರೆ ಇಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಆರ್ ಬೊಮ್ಮಾಯಿ ಅವರ ಮೊಮ್ಮಗ, ಬಸವರಾಜ್ ಬೊಮ್ಮಾಯಿ ಅವರ ಮಗನಿಗೆ ಟಿಕೆಟ್ ನೀಡಿಲ್ವಾ..? ಇದು ಕುಟುಂಬ ರಾಝಾರಣ ಅಲ್ವಾ..? ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ಕುಮಾರಸ್ವಾಮಿ ಕುಟುಂಬದಲ್ಲಿ, ದೇವೇಗೌಡರ ಮಕ್ಕಳು,‌ಮೊಮ್ಮಕ್ಕಳು, ಸೊಸೆಯಂದಿರಿಗೆ ಟಿಕೆಟ್ ನೀಡಿಲ್ವಾ..? ಇವರೆಲ್ಲ ಏನು ಮೋದಿಯವರೆ..? ಇವರೆಲ್ಲ ಕುಟುಂಬ ರಾಜಕಾರಣ ಮಾಡ್ತಿಲ್ವಾ..? ಭಾಷಣ ಮಾಡುವುದು ಸುಲಭ ಮೋದಿಯವರೇ. ಆದರೆ ನುಡಿದಂತೆ ನಡೆದುಕೊಳ್ಳುವುದು ನಿಮ್ಮಿಂದ ಆಗಲ್ಲ.

ಕೊರೋನಾ ಬಂದಾಗ ಇಡೀ ರಾಜ್ಯದ ಪರಿಸ್ಥಿತಿ ಹೇಗಿತ್ತು ಅನ್ನೋದು ನಿಮಗೂ ಗೊತ್ತು ನಮಗೂ ಗೊತ್ತು. ಇಂಥ ಸಂದರ್ಭದಲ್ಲಿ ಯಡಿಯೂರಪ್ಪ, ಶ್ರೀರಾಮುಲು, ಸುಧಾಕರ್ ಅವರು ಚೀನಾದ ಜೊತೆಗೆ ವ್ಯವಹಾರ ಮಾಡು, ಪಿಪಿಇ ಕಿಟ್ ನಲ್ಲಿ ಕಮಿಷನ್ ತಿಂದಿದ್ದು, ಲೂಟಿ ಒಡೆದಿರೋದು ವರದಿಯಾಗಿದೆ. ಚಾಮರಾಜನಗರದಲ್ಲಿ ಆಕ್ಸಿಜನ್ ಕೊಡದೆ 39 ಜನರ ಸಾವಿಗೆ ಕಾರಣರಾದ ಇವರಿಗೆಲ್ಲ ಕ್ಷಮೆ ಇದ್ಯಾ..? ಎಂದು ಪ್ರಶ್ನೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯಡಿಯೂರಪ್ಪ, ಶ್ರೀರಾಮುಲುಗೆ ಎಸ್ಐಟಿ ಸಂಕಷ್ಟ..!

ಬೆಂಗಳೂರು: ಬಿಜೆಪಿ ಸರ್ಕಾರವಿದ್ದಾಗ ಕೋವಿಡ್ ಕಾಲದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಎಸ್ಐಟಿ ತನಿಖೆಗೆ ಒಪ್ಪಿಸಿದೆ. ನಿವೃತ್ತ ನ್ಯಾಯಮೂರ್ತಿ ಮೂಲಕ ಈ ಹಗರಣದ ತನಿಖೆ

ವಕ್ಫ್ ಆಸ್ತಿ | ಕಠಿಣ ಕ್ರಮಕ್ಕೆ ಮುಸ್ಲಿಂ ಮುಖಂಡರ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ, ನವೆಂಬರ್. 15b: ತಾಲೂಕಿನ ಚರ್ಮ ಕೈಗಾರಿಕೆ ಜಾಗ ಹಾಗೂ ಜನತಾ ಕಾಲೋನಿಯಲ್ಲಿರುವ ಚರ್ಮದ ಮಂಡಿ ಜಾಗ

ಅಧಿಕ ಕೊಲೆಸ್ಟ್ರಾಲ್ ನಿಂದ ಬಳಲುತ್ತಿದ್ದೀರಾ ? ಹಾಗಾದರೆ ಇವುಗಳನ್ನು ತಿನ್ನಬೇಡಿ….!

ಸುದ್ದಿಒನ್ | ಇತ್ತೀಚಿನ ದಿನಗಳಲ್ಲಿ ಕೊಲೆಸ್ಟ್ರಾಲ್ ತುಂಬಾ ಅಪಾಯಕಾರಿಯಾಗುತ್ತಿದೆ. ಇದು ಬೊಜ್ಜಿಗೆ ತುತ್ತಾಗುವಂತೆ ಮಾಡುತ್ತದೆ. ಅಷ್ಟೇ ಅಲ್ಲದೇ ಆರೋಗ್ಯವನ್ನೂ ಹಾಳುಮಾಡುತ್ತದೆ ಮತ್ತು ಅಪಾಯಕಾರಿ ಕಾಯಿಲೆಗಳಿಗೆ ತುತ್ತಾಗುವಂತೆ ಮಾಡುತ್ತದೆ. ಆದ್ದರಿಂದ ದೇಹದಲ್ಲಿರುವ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು

error: Content is protected !!