3 ಕ್ಷೇತ್ರಗಳ ಉಪಚುನಾವಣೆಯ ಮತದಾನ ಆರಂಭ : ಕಣದಲ್ಲಿರೋದು ಎಷ್ಟು ಅಭ್ಯರ್ಥಿಗಳು..?

suddionenews
1 Min Read

ಬಾರೀ ಕುತೂಹಲಕ್ಕೆ ಕಾರಣವಾಗಿದ್ದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇಂದು ಬೆಳಗ್ಗೆ 7 ಗಂಟೆಯಿಂದಾನೇ ಮತದಾನ ಶುರುವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಘಟಾನುಘಟಿ ನಾಯಕರು ಅಖಾಡದಲ್ಲಿದ್ದು, ಈಗ ಅಗ್ನಿಪರೀಕ್ಷೆಗೆ ನಿಂತಿದ್ದಾರೆ. ಸಂಜೆ 6 ಗಂಟೆಯವರೆಗೂ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮತಗಟ್ಟೆಗಳ ಸುತ್ತ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.

ಆಯಾ ಕ್ಷೇತ್ರದ ಮತದಾರರು ಬೆಳಗ್ಗೆಯೇ ಮತಗಟ್ಟೆಯ ಬಳಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಮೂರು ಕ್ಷೇತ್ರದಲ್ಲೂ ಭರ್ಜರಿ ಮತದಾನ ನಡೆಯುತ್ತಿದೆ. ಘಟಾನುಘಟಿ ಅಭ್ಯರ್ಥಿಗಳು ಅಬ್ಬರದ ಪ್ರಚಾರವನ್ನು ನಡೆಸಿದ್ದಾರೆ. ಜನರ ಮನೆ ಮನೆ ಬಾಗಿಲಿಗೆ ಹೋಗಿ ಮತ ನೀಡುವಂತೆ ಮನವಿ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಕಾಂಪಿಟೇಷನ್ ಇದೆ.

ಎರಡು ಬಾರಿ ಸೋತಿದ್ದಂತ ನಿಖಿಲ್ ಕುಮಾರಸ್ವಾಮಿ ಇದೀಗ ಚನ್ನಪಟ್ಟಣದಿಂ ಮೂರನೇ ಬಾರಿಗೆ ಅಗ್ನಿಪರೀಕ್ಷೆಗೆ ಇಳಿದಿದ್ದಾರೆ. ಪತಿಯ ಪರವಾಗಿ ರೇವತಿ ಅವರು ಕೂಡ ಪ್ರಚಾರದಲ್ಲಿ ಭಾಗಿಯಾಗಿ, ಈ ಒಂದು ಬಾರಿ ಅವಕಾಶ ಕೊಡಿ ಎಂದು ಮನವಿ ಮಾಡಿದ್ದರು. ಇನ್ನು ಚನ್ನಪಟ್ಟಣದಿಂದಾನೆ ಸಿಪಿ ಯೋಗೀಶ್ವರ್ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಗೆ ಬಂದಿದ್ದಾರೆ. ಇನ್ನು ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಎದುರು ಬಿಜೆಪಿಯಿಂದ ಬಂಗಾರು ಹನುಮಂತು ಅಖಾಡದಲ್ಲಿದ್ದಾರೆ. ಹಾಗೇ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ನಿಂದ ಯಾಸೀರ್ ಪಠಾಣ್ ಸ್ಪರ್ಧೆ ಮಾಡಿದ್ರೆ, ಬಿಜೆಪಿಯಿಂದ ಭರತ್ ಬೊಮ್ಮಾಯಿ ಸ್ಪರ್ಧೆ ಮಾಡಿದ್ದಾರೆ. ಉಳಿದಂತೆ ಮೂರು ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ 45 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *