Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟ ದರ್ಶನ್ ಗೆ ಗೃಹ ಇಲಾಖೆಯಿಂದ ಶಾಕ್ : ಸಿಕ್ಕ ಜಾಮೀನು ಕ್ಯಾನ್ಸಲ್ ಆಗುತ್ತಾ..?

---Advertisement---

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ಬೆನ್ನು ನೋವಿನ ಸಮಸ್ಯೆಯಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಸದ್ಯ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಆರು ವಾರಗಳ ಕಾಲ ಚಿಕಿತ್ಸೆಗೆಂದು ಸಮಯ ನೀಡಲಾಗಿದೆ. ಆದರೆ ಈ ಜಾಮೀನು ಪ್ರಶ್ನಿಸಿ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಹೋಗಲು ನಿರ್ಧಿರಿಸಿದೆ. ಇದಕ್ಕೆ ಗೃಹ ಸಚಿವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ನಟ ದರ್ಶನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಗೆ ಹೋಗುವುದಾದರೆ ಹೋಗಿ ಎಂದು ಹೇಳಿದ್ದೇನೆ. ಮೇಲ್ಮನವಿ ಸಲ್ಲಿಸಲು ವಿಳಂಬ ಆಗಿಲ್ಲ. ಯಾವಾಗ ತೀರ್ಮಾನ ಮಾಡಬೇಕು ಎಂಬುದರ ಬಗ್ಗೆ ಗೃಹ ಇಲಾಖೆಯ ಕಾರ್ಯದರ್ಶಿಗಳು ತೀರ್ಮಾನ ಕೈಗೊಳ್ಳುತ್ತಾರೆ. ನಾನು ಕೂಡ ಮೇಲ್ಮನವಿಗೆ ಹೋಗುವುದಾದರೆ ಹೋಗಿ ಎಂದು ಹೇಳಿದ್ದೇನೆ. ಪ್ರಕ್ರಿಯೆಗಳನ್ನು ಅನುಸರಿಸಿಯೇ ಇಂಥಹ ಕೇಸುಗಳಲ್ಲಿ ಮುಂದುವರೆಯಬೇಕು. ಕಾನೂನು ಇಲಾಖೆಯಿಂದ ಮಾಹಿತಿ ಪಡೆದ ಬಳಿಕ ಗೃಹ ಇಲಾಖೆ ಈ ಸಂಬಂಧ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದಿದ್ದಾರೆ.

ಇ‌ನ್ನು ದರ್ಶನ್ ಅವರು ಆರೋಗ್ಯದ ಸಮಸ್ಯೆಯಿಂದ ಜಾಮೀನು ಪಡೆದಿದ್ದು, ಡಿಸೆಂಬರ್ 11ಕ್ಕೆ ಜಾಮೀನು ಅವಧಿ ಮುಕ್ತಾಯವಾಗುತ್ತದೆ. ಅಷ್ಟರೊಳಗೆ ಟ್ರೀಟ್ಮೆಂಟ್ ಪಡೆದಿರಬೇಕು. ಇನ್ನು ಎರಡು ವಾರವಷ್ಟೇ ಅವರಿಗೆ ಕಾಲಾವಕಾಶವಿದೆ. ಇದರ ನಡುವೆ ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಹೋಗುವುದಕ್ಕೆ ತಯಾರಿ ನಡೆಸುತ್ತಿದೆ. ಅತ್ತ ಪವಿತ್ರಾ ಗೌಡ ಕೂಡ ಜಾಮೀನು ಪಡೆಯಲು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ. ಅವರ ಜಾಮೀನು ಅರ್ಜಿಯು ನವೆಂಬರ್ 21 ಕ್ಕೆ ಮುಂದೂಡಿಕೆಯಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment