ಸುದ್ದಿಒನ್, ಚಿತ್ರದುರ್ಗ, ನವೆಂಬರ್. 16 : ತಾಲ್ಲೂಕಿನ ಸಿರಿಗೆರೆಯ ಸಿರಿಗೆರೆ ತರಳಬಾಳು ಕ್ಲಾತ್ ಸ್ಟೋರ್ಸ್ ಮಾಲೀಕರಾದ ಜಿ. ನಾಗರಾಜ್ (48) ಇಂದು ಮಧ್ಯಾಹ್ನ ಕಡಿಮೆ ರಕ್ತದ ಒತ್ತಡದಿಂದ ಚಿತ್ರದುರ್ಗದಲ್ಲಿ ನಿಧನರಾಗಿದ್ದಾರೆ.
ಮಧ್ಯಾಹ್ನ ಊಟ ಮಾಡುವ ವೇಳೆ ನೋಡು ನೋಡುತ್ತಿದ್ದಂತೆಯೇ ಕುಳಿತಲ್ಲಿಯೇ ಕುಸಿದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ತಪಾಸಣೆ ಬಳಿಕ ಸಾವನ್ನಪ್ಪಿರುವುದು ದೃಢಪಟ್ಟಿದೆ. ಮೃತರು ಪತ್ನಿ, ತಂದೆ, ತಾಯಿ, ಈರ್ವರು ಸಹೋದರರು ಹಾಗೂ ಓರ್ವ ಮಗಳನ್ನು ಅಗಲಿದ್ದಾರೆ.
ಅವರ ಅಂತ್ಯ ಸಂಸ್ಕಾರವು ಸಿರಿಗೆರೆಯ ಅವರ ಜಮೀನಿನಲ್ಲಿ ಭಾನುವಾರ 12 ಗಂಟೆಗೆ ನಡೆಯುವುದೆಂದು ಕುಟುಂಬ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











