Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ವಾಪಾಸ್ : ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

ಬಾಗಲಕೋಟೆ ನ 17: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಬಿಪಿಎಲ್ ಕಾರ್ಡ್ ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಆದಾಯ ತೆರಿಗೆ ಪಾವತಿಸುವವರಿಗೂ, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ ಎಂದು ಮರು ಪ್ರಶ್ನಿಸಿದ ಸಿಎಂ, ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಎಂದರು.

40% ಕಮಿಷನ್ ಆರೋಪದಿಂದ ಮುಕ್ತರಾಗಿದ್ದೇವೆ ಎನ್ನುವ ಆರ್.ಅಶೋಕ್ ಮಾತಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳು ಬಿಡುಗಡೆ ಆಗುತ್ತಾರೆ. ಹಾಗಂತ ಕೊಲೆಯೇ ಆಗಿಲ್ಲ ಅಂದರೆ ಅದರಲ್ಲಿ ಅರ್ಥ ಇಲ್ಲ. ಕೊಲೆ ನಡೆದಿರುತ್ತದೆ. ಸಾಕ್ಷಿಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೆ ಅಂದರು.

ಆಪರೇಷನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಲಾಗಿತ್ತು ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ” ಬಿಜೆಪಿಯವರು ಆಪರೇಷನ್ ಕಮಲಕ್ಕೆ ಪ್ರಯತ್ನಿಸಿದರು, ವಿಫಲರಾದರು ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಿ.ಬಸವರಾಜಪ್ಪನವರ ಅನುಭವ ಚಿಂತಾಮಣಿ ವಚನ ಪುಸ್ತಕ ಬಿಡುಗಡೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 17 : ವಚನ ಚಳುವಳಿಯ ಕೊಡುಗೆಯಿಂದ ಕನ್ನಡ ಸಂಸ್ಕೃತಿ ಸಮೃದ್ದವಾಗಿದೆ ಎಂದು ಪ್ರೊ.ಜಿ.ಪರಮೇಶ್ವರಪ್ಪ ಹೇಳಿದರು.

ಮುಂದಿನ ಯುಗ ಜ್ಞಾನ ವಿಜ್ಞಾನಗಳ ಯುಗ : ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

    ಸುದ್ದಿಒನ್, ಚಿತ್ರದುರ್ಗ, ನವೆಂಬರ್. 17 : ಮುಂದಿನ ಯುಗ ಜ್ಞಾನ ವಿಜ್ಞಾನಗಳ ಯುಗವಾಗುತ್ತದೆ ಆದ್ದರಿಂದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಶ್ರೀ ಜಗದ್ಗುರು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.

ಚಿತ್ರದುರ್ಗ | ಜನರ ನಿದ್ದೆಕೆಡಿಸಿದ್ದ ಚಿರತೆ ಸೆರೆ..!

    ಸುದ್ದಿಒನ್, ಚಿತ್ರದುರ್ಗ, ನವೆಂಬರ್. 17 : ಇತ್ತೀಚೆಗಂತೂ ಚಿರತೆ ಹಾವಳಿ ಜಾಸ್ತಿಯಾಗಿದೆ. ಹಲವು ಜಿಲ್ಲೆಗಳಲ್ಲಿ ಚಿರತೆಯ ಉಪಟಳ ಜಾಸ್ತಿಯಾಗಿದೆ. ಕುರಿ, ಮೇಕೆಗಳನ್ನು ತಿಂದು, ಆತಂಕ ತಂದೊಡ್ಡುತ್ತಿವೆ. ಚಿತ್ರದುರ್ಗ ಜಿಲ್ಲೆಯಲ್ಲೂ ಚಿರತೆಯೊಂದು ಬಹಳ

error: Content is protected !!