ಸುದ್ದಿಒನ್, ಹಿರಿಯೂರು, ನವೆಂಬರ್.18 : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಹತ್ತು ಜನರು ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಐಮಂಗಲ ಬಳಿ ನಡೆದಿದೆ.
ಹಿರಿಯೂರಿನಿಂದ ದಾವಣಗೆರೆ ಕಡೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಗಾಯಾಳುಗಳನ್ನು ತಕ್ಷಣವೇ ಚಿತ್ರದುರ್ಗ, ಹಿರಿಯೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಚಿಕಿತ್ಸೆ ನೀಡಲಾಗಿದ್ದು ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ.
ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











