Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

---Advertisement---

ಸುದ್ದಿಒನ್, ಚಳ್ಳಕೆರೆ, ನವೆಂಬರ್. 20 : ಪೌತಿ ಖಾತೆ ಮಾಡಿಕೊಡಲು 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ತಾಲೂಕಿನ ನೆಲಗೇಲತಹಟ್ಟಿ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಅವರನ್ನು ಬುಧವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಗ್ರಾಮದ ಚನ್ನಕೇಶವಯ್ಯ ಎಂಬುವವರು ನೀಡಿದ ದೂರಿನ ಮೇರೆಗೆ
ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು. ಚನ್ನಕೇಶವಯ್ಯ ಅವರು ತಮ್ಮ ಹೆಸರಿಗೆ ಖಾತೆ ಮಾಡಿಕೊಡಲು ಗ್ರಾಮ ಲೆಕ್ಕಾಧಿಕಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಅವರು ಪೌತಿ ಖಾತೆ ಮಾಡಿ ಕೊಡಲು 10 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದಾರೆ. ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ ವೇಳೆ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದಿದ್ದಾನೆ. ಗ್ರಾಮ ಲೆಕ್ಕಾಧಿಕಾರಿಗೆ ಸಹಕಾರ ನೀಡಿದ್ದ ಖಾಸಗಿ ವ್ಯಕ್ತಿ ಬೋರೇಶ್ ಎಂಬಾತನನ್ನು ಕೂಡಾ ಬಂಧಿಸಲಾಗಿದೆ.

ಲೋಕಾಯುಕ್ತ SP ವಾಸುದೇವ್ ರಾವ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ತನಿಖೆ ಮುಂದುವರೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment