ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.
ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು ತೆಗೆದುಕೊಂಡು ಬರಬೇಕು. ಒಳ ರೋಗಿಗಳಾಗಿ ದಾಖಲಾಗುವ ಸಂದರ್ಭದಲ್ಲಿ ತಪ್ಪದೇ ಎ.ಬಿ.ಆರ್.ಕೆ ಕೊಠಡಿಯಲ್ಲಿ ನೊಂದಣಿ ಮಾಡಿಸಬೇಕು. ಈ ಯೋಜನೆಯಡಿ ನೊಂದಣಿಯಾದ ಅರ್ಹ ಫಲಾನುಭವಿಗೆ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ರಕ್ತ ಪರೀಕ್ಷೆ, ಸಿ.ಟಿ.ಸ್ಕ್ಯಾನ್, ಎಕ್ಸ್-ರೇ, ಸ್ಕ್ಯಾನಿಂಗ್, ಆರ್ಥೋಇಂಪ್ಲಾಂಟ್, ಔಷಧಿ ಮತ್ತು ಮಾತ್ರೆಗಳನ್ನು ಉಚಿತವಾಗಿ ನೀಡಲಾಗುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ರೋಗಿಗಳು ಇತ್ತೀಚೆಗೆ ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ತದನಂತರ ರೆಫರೆಲ್‍ಗಾಗಿ ಇಲ್ಲಿನ ವೈದ್ಯಾಧಿಕಾರಿಗಳಿಗೆ ಒತ್ತಡ ತರುತ್ತಿದ್ದಾರೆ. ಆದ್ದರಿಂದ ಈ ರೀತಿ ಮಾಡದೇ ಮೊದಲು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಿರಿ. ಒಂದು ವೇಳೆ ಚಿಕಿತ್ಸೆ ಲಭ್ಯವಿಲ್ಲದಿದ್ದಾಗ ಮಾತ್ರ ಎ.ಬಿ.ಆರ್.ಕ ಅಡಿಯಲ್ಲಿ ರೆಫರೆಲ್ ಮಾಡಿಕೊಡಲಾಗುತ್ತದೆ. ಹಾಗೆಯೇ ರೋಗಿಗಳು ಆಸ್ಪತ್ರೆಯಲ್ಲಿ ಯಾವುದೇ ಮಧ್ಯವರ್ತಿಗೆ ಹಣ ನೀಡಬೇಕಾಗಿಲ್ಲ. ಒಂದು ವೇಳೆ ಯಾರಾದರು ಹಣ ಕೇಲಿದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಎಸ್.ಪಿ.ರವೀಂದ್ರ ದೂರವಾಣಿ ಸಂಖ್ಯೆ 9448943163 ಗೆ ಸಂಪರ್ಕಿಸಿ ದೂರು ನೀಡಬಹುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















