Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ಹರಿ ಓಂಕುಮಾರ್(24 ವರ್ಷ) ಬಂಧಿತ. ಆರೋಪಿಯಿಂದ 2,25,500/-ರೂ ಬೆಲೆಬಾಳುವ 4 KG 590 Gram ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಖಚಿತ ಮಾಹಿತಿಯ ಮೇರೆಗೆ, ಕ್ಯಾದಿಗೆರೆ ಹತ್ತಿರದ ಹಳೆಯ ಎನ್ ಹೆಚ್-4 ರಸ್ತೆಯಲ್ಲಿರುವ ನ್ಯೂ ಜೈ ಹಿಂದ್ ಡಾಬಾ ಮುಂಭಾಗದ ಹೊರ ಆವರಣದಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಕರಣವನ್ನು ಬೇಧಿಸಿದ ಚಿತ್ರದುರ್ಗ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ವೆಂಕಟೇಶ,ಎನ್, ಎಎಸ್,ಐ ಅಂಜನಪ್ಪ, ಹೆಚ್.ಸಿ-1017 ಸಿದ್ದಲಿಂಗಯ್ಯ ಹಿರೇಮಠ, ಹೆಚ್.ಸಿ-1274 ಗಂಗಾಧರಪ್ಪಪಿಸಿ-2659 ಗಗನ್ ದೀಪ್ ಪವಾರ್, ಪಿಸಿ-2067 ಭೀಮನಗೌಡ ಪಾಟೀಲ್ ಇವರ ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಶಾಘಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...