Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿರಿಗೆರೆ ವೈದ್ಯ ತಿಮ್ಮೇಗೌಡ ಅಪಘಾತದಲ್ಲಿ ಸಾವು : ನಾಳೆ ಚಳ್ಳಕೆರೆಯಲ್ಲಿ ಅಂತ್ಯಕ್ರಿಯೆ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರ ಸಿರಿಗೆರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಹಾಗೂ ಮಕ್ಕಳ ತಜ್ಞರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಜಿ.ಆರ್. ತಿಮ್ಮೇಗೌಡ (34ವರ್ಷ) ನಿನ್ನೆ(ಶನಿವಾರ) ರಾತ್ರಿ ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಬರುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮೃತರು ವೈದ್ಯರು ತಂದೆ – ತಾಯಿ, ಪತ್ನಿ, ಹಾಗೂ ಒಬ್ಬ ಪುತ್ರಿ ಮತ್ತು ಅಪಾರ ಬಂದು ಬಳಗವನ್ನ ಅಗಲಿದ್ದಾರೆ. ಉತ್ತಮ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ತಿಮ್ಮೇಗೌಡ ಅವರ ಸಾವಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಅಂತಿಮ ದರ್ಶನಕ್ಕೆ ಮಾಳಪ್ಪನಹಟ್ಟಿ ಸ್ವಗೃಹದಲ್ಲಿ ಇಡಲಾಗಿದೆ. ಅಂತ್ಯಕ್ರಿಯೆಯನ್ನು ನಾಳೆ(ಸೋಮವಾರ) ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಬಳಿಯ ತೋಟದಲ್ಲಿ ನೇರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment