Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

RCB ಸೇರ್ತಾರೆ ಅಂದುಕೊಂಡ್ರೆ ಕನ್ನಡಿಗ ರಾಹುಲ್ ಡೆಲ್ಲಿ ಪಾಲು..!

---Advertisement---

RCB ಕ್ರೇಜ್ ಎಷ್ಟಿದೆ‌ ಎಂಬುದನ್ನು ಬಿಡಿಸಿ ಹೇಳುವ ಅಗತ್ಯವಿಲ್ಲ. ಐಪಿಎಲ್ ಶುರುವಾಗುವ ಮುನ್ನವೇ ಆರ್ಸಿಬಿ ಫೀವರ್ ಅಭಿಮಾನಿಗಳಲ್ಲಿ ಜೋರಾಗಿ ಬಿಡುತ್ತದೆ. ಆರ್ಸಿಬಿ ಅಂದ್ರೆ ಅಷ್ಟು ಪ್ರೀತಿ ಕನ್ನಡಿಗರಿಗೆ. ಈಗ ಆರ್ಸಿಬಿ ಫ್ಯಾನ್ಸ್ ಖುಷಿ ಪಡೋ ಅಂತ ವಿಚಾರವೊಂದು ಸಿಕ್ಕಿದೆ. ಕೆ.ಎಲ್.ರಾಹುಲ್ ಆರ್ಸಿಬಿ ತಂಡ ಸೇರಲಿದ್ದಾರೆ ಎನ್ನಲಾಗ್ತಾ ಇತ್ತು. ಆದರೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ಬರೋಬ್ಬರಿ 14 ಕೋಟಿಗೆ ಹರಾಜಾಗಿದ್ದಾರೆ.

ಕೆ ಎಲ್ ರಾಹುಲ್ ಗಾಗಿ ಸಿಎಸ್ಕೆ, ಆರ್ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಭಾರೀ ಪೈಪೋಟಿ ನಡೆದಿತ್ತು. ಫೈನಲಿ ಡೆಲ್ಲಿ ಕ್ಯಾಪಿಟಲ್ಸ್ ರಾಹುಲ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಕೆ.ಎಲ್.ರಾಹುಲ್ ಒಬ್ಬ ಅದ್ಭುತ ಆಟಗಾರ ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಲಖನೌ ತಂಡ ರಾಹುಲ್ ಮಾಡಿದ ಸಣ್ಣ ತಪ್ಪಿಗೆ ಅವಮಾನ ಮಾಡಿತ್ತು. ರಾಹುಲ್ ಅವರಿಗೆ ಆದ ಅವಮಾನದಿಂದ ಕನ್ನಡಿಗರು ರೊಚ್ಚಿಗೆದ್ದಿದ್ದರು. ಕೆ.ಎಲ್.ರಾಹುಲ್ ಕೂಡ ಈಗಾಗಲೇ ತಂಡವನ್ನ ತೊರೆದಿದ್ದಾರೆ. ಇದರ ನಡುವೆ ಅವರು ಆರ್ಸಿಬಿ ಸೇರಲಿದ್ದಾರೆ ಎಂಬ ವಿಚಾರವೇ ಖುಷಿ ಕೊಡುತ್ತಿದೆ. ಕೆ.ಎಲ್.ರಾಹುಲ್ ಮೂಲತಃ ಬೆಂಗಳೂರು ಹುಡುಗ. ಅಪ್ಪಟ ಕನ್ನಡಿಗ. ಇವರೇ ಆರ್ಸಿಬಿಯಲ್ಲಿ ಆಡದೆ ಹೋದರೆ ಹೇಗೆ ಎಂಬುದು ಕನ್ನಡಾಭಿಮಾನಿಗಳ ಪ್ರಶ್ನೆಯಾಗಿತ್ತು.

ಆಸ್ಟ್ರೇಲಿಯಾ ಹಾಗೂ ಭಾರತ ತಂಡದ ನಡುವೆ ಮೊದಲ ಟೆಸ್ಟ್ ಮ್ಯಾಚ್ ನಡೆಯುತ್ತಿದ್ದು, ಈ ಸಂಧರ್ಭದಲ್ಲಿಯೇ ಅಭಿಮಾನಿಯೊಬ್ಬರು ‘ರಾಹುಲ್ ಆರ್ಸಿಬಿಗೆ ಬಾ ಗುರೂ’ ಎಂದು ಮನವಿ ಮಾಡಿದ್ದಾರೆ. ಅದಕ್ಕೆ ಉತ್ತರಿಸಿದ ಕೆ.ಎಲ್.ರಾಹುಲ್ ದೇವರ ಆಶೀರ್ವಾದವಿದ್ದರೆ, ಎಲ್ಲವೂ ಅಗುತ್ತೆ ಎಂದೇ ಹೇಳಿದ್ದಾರೆ. ಈ ಮಾತು ಕೇಳಿ ಕನ್ನಡಿಗರು ಖುಷಿಯಾಗಿದ್ದರು. ಆದರೆ ಈಗ ಮತ್ತೆ ನಿರಾಸೆಯಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment