ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಬಿರುಕು : ಅಂಥದ್ದೇನಾಯ್ತು..?

suddionenews
1 Min Read

ಬಾಗಲಕೋಟೆ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಮೂರುವರೆ ವರ್ಷದಿಂದ ನಡೆಯುತ್ತಿದೆ. ಸರ್ಕಾರಕ್ಕೆ ಸಾಕಷ್ಟು ಬಾರಿ ಕೊನೆಯ ಎಚ್ಚರಿಕೆಯನ್ನು ಕೊಡುವ ಪ್ರಯತ್ನ ಮಾಡಿದ್ದಾರೆ. ಕೂಡಲ ಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ಹೋರಾಟ ನಡೆಯುತ್ತಿದೆ. ಮೀಸಲಾತಿ ಹೋರಾಟಕ್ಕೆ ಬಿಜೆಪಿ ಸರ್ಕಾರವಿದ್ದಾಗ ಶಾಸಕ ಯತ್ನಾಳ್ ಸೇರಿದಂತೆ ಸಾಕಷ್ಟು ಶಾಸಕರು ಬೆಂಬಲ ನೀಡಿದ್ದರು. ಕಾಂಗ್ರೆಸ್ ಸರ್ಕಾರ ಬಂದಾಗಲೂ ಕಾಂಗ್ರೆಸ್ ಶಾಸಕರು, ಸಚಿವರೇ ಬೆಂಬಲ ನೀಡಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್, ವಿಜಯಾನಂದ ಕಾಶಪ್ಪನವರ್, ವಿನಯ್ ಕುಲಕರ್ಣಿ ಹೋರಾಟದಲ್ಲಿ ಭಾಗಿಯಾಗಿದ್ದರು. ಆದರೆ ಈಗ ಪಂಚಮಸಾಲಿ ಹೋರಾಟದಲ್ಲಿಯೇ ಬಿರುಕು ಕಾಣಿಸಿಕೊಂಡಿದೆ.

ಈ ಸಂಬಂಧ ಕೂಡಲಸಂಗಮದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಪ್ರತ್ಯೇಕ ಸಭೆ ಮಾಡಿದ್ದಾರೆ. ಆ ಮೂಲಕ ಸ್ವಾಮೀಜಿ ವಿರೋಧವಾಗಿ ಪೀಠದಲ್ಲೇ ಸಭೆ ನಡೆಸಿ, ಸೆಡ್ಡು ಹೊಡೆದಿದ್ದಾರೆ.ವಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಪೀಠದಲ್ಲಿ ಪ್ರಮುಖ ಮುಖಂಡರ ನೇತೃತ್ವದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಶಾಸಕ ಕಾಶಪ್ಪನವರ್ ಮಾಡಿದ್ದಾರೆ. ಈ ಸಭೆಯಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ ಟ್ರ್ಯಾಕ್ಟರ್ ರ್ಯಾಲಿ ಮಾಡಲು ಮುಂದಾಗಿರುವ ಸ್ವಾಮೀಜಿ ತೀರ್ಮಾನಕ್ಕೆ ಕಾಶಪ್ಪನವರ್ ವಿರೋಧ ವ್ಯಕ್ತಪಡಿಸಿದ್ದಾರೆ.

ಮೂರುವರೆ ವರ್ಷದಿಂದ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಈಗ ಏಳನೇ ಹಂತದ ಹೋರಾಟ ಶುರುವಾಗಿದೆ. ಮುಖ್ಯಮಂತ್ರಿ ನಿರ್ಲಕ್ಷ್ಯ, ಸರ್ಕಾರದ ಅಸಡ್ಡೆ ಖಂಡಿಸಿ ಹೋರಾಟ ಮಾಡುತ್ತಿದ್ದೇವೆ. ಡಿಸೆಂಬರ್ 10ಕ್ಕೆ ಸುವರ್ಣ ಸೌಧಕ್ಕೆ ಟ್ರ್ಯಾಕ್ಟರ್ ಮೂಲಕ ಮುತ್ತಿಗೆ ಹಾಕಲಿದ್ದೇವೆ. ಇವತ್ತಿನ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಾತು ತಪ್ಪಿದರು, ಬೆಂಗಳೂರಿಗೆ ಕರೆದು ಸಿದ್ದರಾಮಯ್ಯ ಅವರು ಎರಡು ಗಂಟೆ ಚರ್ಚೆ ನಡರಸಿದರು, ಸಿಎಂ ಭರವಸೆ ಕೊಟ್ಟಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದರು.

Share This Article
Leave a Comment

Leave a Reply

Your email address will not be published. Required fields are marked *