Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರಸಭೆ ಚುನಾವಣಾ ಫಲಿತಾಂಶ : 15 ನೇ ವಾರ್ಡ್‌ನ ವಿಜೇತ ಅಭ್ಯರ್ಥಿ ನರಸಿಂಹಮೂರ್ತಿಗೆ ಸನ್ಮಾನ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 28 : ನಗರಸಭೆ ಹದಿನೈದನೆ ವಾರ್ಡಿನ ಸದಸ್ಯ ಸ್ಥಾನಕ್ಕೆ ಕಳೆದ 23 ರಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಶಾಲಿಯಾಗಿರುವ ನರಸಿಂಹಮೂರ್ತಿ ಈ. ಇವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಶಾಲು ಹಾಕಿ ಅಭಿನಂದಿಸಿ ನಂತರ ಒನಕೆ ಓಬವ್ವ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಲಾಯಿತು.

1330 ಮತಗಳನ್ನು ಪಡೆದಿರುವ ನರಸಿಂಹಮೂರ್ತಿ ಈ. ಎದುರಾಳಿ ಎ.ಐ.ಎಂ.ಐ.ಎಂ. ಪಕ್ಷದ ಸೈಯದ್ ಜಿಯಾವುಲ್ಲಾರವರನ್ನು 1018 ಮತಗಳ ಅಂತರದಿಂದ ಸೋಲಿಸಿ ಜಯಗಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಕೇವಲ ನಗರಸಭೆ ಹದಿನೈದನೆ ವಾರ್ಡಿಗೆ ಮಾತ್ರ ಸೀಮಿತವಾಗಿರುವುದು ಬೇಡ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದುಕೊಂಡು ಪಕ್ಷ ಸಂಘಟನೆಗೂ ಹೆಚ್ಚಿನ ಒತ್ತು ನೀಡುವಂತೆ ನರಸಿಂಹಮೂರ್ತಿಗೆ ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ನಾಗರಾಜ್ ಪೈಲೆಟ್, ನಾಗರಾಜ್ ಜಾನ್ಹವಿ, ನಗರಸಭೆ ನಾಮನಿರ್ದೇಶಕ ಸದಸ್ಯ ಹೆಚ್.ಶಬ್ಬೀರ್‍ಭಾಷ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಸಿರಿಗೆರೆ ಪ್ರಕಾಶ್ ಹಾಜರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...